ನಾಪತ್ತೆಯಾಗಿದ್ದ ನಟಿ ರೈಮಾ ಇಸ್ಲಾಂ ಶಿಮು ಅವರ ಮೃತದೇಹ ಗೋಣಿಚೀಲದಲ್ಲಿ ಪತ್ತೆ - Mahanayaka

ನಾಪತ್ತೆಯಾಗಿದ್ದ ನಟಿ ರೈಮಾ ಇಸ್ಲಾಂ ಶಿಮು ಅವರ ಮೃತದೇಹ ಗೋಣಿಚೀಲದಲ್ಲಿ ಪತ್ತೆ

raima islam shimu
19/01/2022

ಢಾಕಾ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರ ಶವ ಕಳೆದ ಸೋಮವಾರ ಕೆರಣಿಗಂಜ್‌ ನ ಹಜರತ್‌ ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ. ಶಿಮು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಭಾನುವಾರ ಕಲಬಾಗನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸ್ಥಳೀಯರು ಮಾಹಿತಿ ನೀಡಿದ ನಂತರ ಕೆರಣಿಗಂಜ್ ಮಾದರಿ ಠಾಣೆಯ ಪೊಲೀಸರ ತಂಡ ಮೃತದೇಹವನ್ನು ಹೊರತೆಗೆದಿದೆ ಎನ್ನಲಾಗಿದೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ ಸಲೀಮುಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (ಎಸ್‌ಎಸ್‌ಎಂಸಿಎಚ್) ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ತಮಿಳುನಾಡು: ನದಿಯಲ್ಲಿ ಮುಳುಗಿ 6 ವಿದ್ಯಾರ್ಥಿಗಳು ಸಾವು, ಇಬ್ಬರ ರಕ್ಷಣೆ

ಐಎನ್‌ ಎಸ್ ರಣವೀರ್ ಯುದ್ಧನೌಕೆಯಲ್ಲಿ ಸ್ಫೋಟ: ಮೂವರು ನೌಕಾ ಸಿಬ್ಬಂದಿ ಸಾವು

ಕೊವಿಡ್ ಗೆ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಬಲಿ

ಚಿಕನ್ ಚಿಲ್ಲಿ, ಬಿರಿಯಾನಿ ತಿನ್ನುವ ಸ್ಪರ್ಧೆ: 40 ಮಂದಿಯ ವಿರುದ್ಧ ಕೇಸ್!

ಇತ್ತೀಚಿನ ಸುದ್ದಿ