ಬಿಜೆಪಿ ಶಾಸಕ ಅನಿಲ್‌ ಬೆನಕೆಯಿಂದ ಕೋವಿಡ್ ನಿಯಮ ಉಲ್ಲಂಘನೆ: ಪ್ರಕರಣ ದಾಖಲು - Mahanayaka
10:25 AM Tuesday 14 - October 2025

ಬಿಜೆಪಿ ಶಾಸಕ ಅನಿಲ್‌ ಬೆನಕೆಯಿಂದ ಕೋವಿಡ್ ನಿಯಮ ಉಲ್ಲಂಘನೆ: ಪ್ರಕರಣ ದಾಖಲು

covid
21/01/2022

ಬೆಳಗಾವಿ: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮಕರ ಸಂಕ್ರಾಂತಿ ಹಬ್ಬದಂದು ಎಮ್ಮೆ  ಓಡಿಸುವ ಸ್ಪರ್ಧೆ ಹಾಗೂ ಧರ್ಮವೀರ ಸಂಭಾಜಿ ಮಹಾರಾಜರ ರಾಜ್ಯಾಭಿಷೇಕ ನಡೆಸಿ ಜನರನ್ನು ಸೇರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಎರಡು ಪ್ರತ್ಯೇಕ ಕೇಸು ದಾಖಲಾಗಿವೆ.


Provided by

ನಗರದ ಚವಾಟ ಗಲ್ಲಿಯಲ್ಲಿ ಚವಾಟ ಯುವಕ ಸಂಘಟನೆ ಹಾಗೂ ಗವಳಿ ಸಮಾಜ ವತಿಯಿಂದ ಎಮ್ಮೆ ಓಡಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಗೆ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಚಾಲನೆ ನೀಡಿದ್ದರು. ಜತೆಗೆ ಬಹುಮಾನ ವಿತರಣೆ ಸಮಾರಂಭದಲ್ಲಿಯೂ ಪಾಲ್ಗೊಂಡಿದ್ದರು.

ಅಲ್ಲದೆ, ಧರ್ಮವೀರ ಸಂಭಾಜಿ ಮಹಾರಾಜ ವೃತ್ತದಲ್ಲಿ ಸಂಭಾಜಿ ಮಹಾರಾಜರ ರಾಜ್ಯಾಭಿಷೇಕ ಕಾರ್ಯಕ್ರಮದಲ್ಲಿ ಶಾಸಕ ಬೆನಕೆ ಪಾಲ್ಗೊಂಡಿದ್ದರು.‌ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಕ್ಯಾಂಪ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಮ್ಮೆ‌ ಓಡಿಸುವ ಸ್ಪರ್ಧೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಈ ಸಂಬಂಧ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂಗಲಿ, ಕೊಲ್ಲಾಪುರ, ಸಾತಾರಾ ಸೇರಿದಂತೆ ಬೆಳಗಾವಿಯ ವಿವಿಧ ಕಡೆಗಳಿಂದ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. ಅನೇಕರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಪಾಲ್ಗೊಂಡಿದ್ದರು. ಈ ಬಗ್ಗೆ ದೂರು ದಾಖಲಿಸುವಂತೆ ಮಂಗಳವಾರ ರಾಜ್ಯ ಕಾಂಗ್ರೆಸ್ ವತಿಯಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಅವರಿಗೆ ಮನವಿ ಮಾಡಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬ್ರಹ್ಮಾವರ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು: ದಕ್ಷಿಣ ಕನ್ನಡದ 5 ಶಾಲೆ, 1 ಪಿಯು ಕಾಲೇಜು ಸ್ಥಗಿತ

ವಿಲೇಜ್ ಅಕೌಂಟೆಂಟ್ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂಪಾಯಿ ವಂಚನೆ: ಆರೋಪಿ ಸೆರೆ

ಚೀನಾದ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಭಾರತೀಯ ಯುವಕನ ಪತ್ತೆಗೆ ಪಿಎಲ್‌ಎ ನೆರವು ಕೋರಿದ ಭಾರತೀಯ ಸೇನೆ

ಇತ್ತೀಚಿನ ಸುದ್ದಿ