ಹಸುವನ್ನು ಮೇಯಿಸಲು ಹೋಗಿದ್ದ ವೃದ್ಧ ಹುಲಿ ದಾಳಿಗೆ ಬಲಿ! - Mahanayaka

ಹಸುವನ್ನು ಮೇಯಿಸಲು ಹೋಗಿದ್ದ ವೃದ್ಧ ಹುಲಿ ದಾಳಿಗೆ ಬಲಿ!

tiger
22/01/2022


Provided by

ಮೈಸೂರು: ಹುಲಿ ದಾಳಿಗೆ ವೃದ್ಧರೊಬ್ಬರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ  ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದ್ದು, ಹಸುಗಳನ್ನು ಮೇಯಿಸಲು ಕಾಡಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

70 ವರ್ಷ ವಯಸ್ಸಿನ ಮರೀಗೌಡ ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಇವರು ಹೆಚ್.ಡಿ.ಕೋಟೆ ತಾಲೂಕಿನ ಹಿರಳ್ಳಿ ನಿವಾಸಿ ಎಂದು ತಿಳಿದು ಬಂದಿದೆ.

ಮರೀಗೌಡ ಅವರು ಪ್ರತೀ ದಿನ ಹಸುಗಳನ್ನು ಮೇಯಿಸಲು ಕಾಡಿಗೆ ಕರೆದುಕೊಂಡು ಹೋಗುತ್ತಿದ್ದು, ಇಂದು ಕೂಡ ಎಂದಿನಂತೆಯೇ ಹಸುಗಳನ್ನು ಮೇಯಿಸಲು ಕಾಡಿಗೆ ತೆರಳಿದ್ದರು. ಈ ವೇಳೆ ಹುಲಿ ದಾಳಿ ಮಾಡಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಅವರು  ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರಣ್ಯ  ಇಲಾಖೆ ಸಿಬ್ಬಂದಿ ಸೇರಿದಂತೆ  ಸಂಬಂಧಪಟ್ಟವರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಾಲು, ನೀರು, ವಿದ್ಯುತ್ ದರ ಏರಿಕೆ ಬಗ್ಗೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಯುವ ಕಾಂಗ್ರೆಸ್ ನಾಯಕಿಗೆ ಚೂರಿ ಇರಿತ

ಮಹಿಳೆಯರ ಏಷ್ಯಾಕಪ್​ ಹಾಕಿ ಟೂರ್ನಿ: ಮಲೇಷ್ಯಾ ವಿರುದ್ಧ ಭಾರತ ತಂಡಕ್ಕೆ ಭರ್ಜರಿ ಗೆಲುವು

ಕೊರಗಜ್ಜನ ವೇಷ ಹಾಕಿ ಅಪಹಾಸ್ಯ; ಮತ್ತೆ ಪ್ರಕರಣ ದಾಖಲು

ಸಿಎಂ ಹತ್ಯೆ ಮಾಡುವುದಾಗಿ ಬೆದರಿಕೆ: ನಟ ಪವನ್ ಕಲ್ಯಾಣ್ ಅಭಿಮಾನಿ ಬಂಧನ

 

ಇತ್ತೀಚಿನ ಸುದ್ದಿ