ಹಾಲು, ನೀರು, ವಿದ್ಯುತ್ ದರ ಏರಿಕೆ ಬಗ್ಗೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ - Mahanayaka
8:23 PM Thursday 15 - January 2026

ಹಾಲು, ನೀರು, ವಿದ್ಯುತ್ ದರ ಏರಿಕೆ ಬಗ್ಗೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

basavaraj bommai
22/01/2022

ಬೆಂಗಳೂರು: ಹಾಲು, ನೀರು ಮತ್ತು ವಿದ್ಯುತ್ ದರ ಏರಿಕೆ ಪ್ರಸ್ತಾವನೆಗಳ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು  ಶನಿವಾರ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲು, ನೀರು ಮತ್ತು ವಿದ್ಯುತ್ ದರ ಏರಿಕೆ ಪ್ರಸ್ತಾವನೆಗಳ ಕುರಿತು ರಾಜ್ಯ ಸರ್ಕಾರ ಯಾವುದೇ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಬೆಲೆ ಏರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಬಂದಿದ್ದು, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ನಾವು ಮೊದಲು ಎಲ್ಲಾ ಅಂಶಗಳನ್ನು ಪರಿಶೀಲಿಸಬೇಕಾಗಿದೆ ಎಂದರು.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಆದರೆ ತೀವ್ರತೆ ಮತ್ತು ಗಂಭೀರತೆ ಮೊದಲಿನಂತೆಯೇ ಇಲ್ಲ. ರಾಜ್ಯ ಸರ್ಕಾರವು ಕೋವಿಡ್ ನಿರ್ಬಂಧಗಳನ್ನು ಭಾಗಶಃ ಸಡಿಲಿಸಲು ನಿರ್ಧರಿಸಿದ್ದು, ಜನರು ಸೂಕ್ತ ಔಷಧಿಗಳು ಮತ್ತು ಕೋವಿಡ್ ಮಾರ್ಗಸೂಚಿಗಳನ್ನು

ಅನುಸರಿಸುವುದರಿಂದ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಬಹುದು ಎಂದು ಅಧಿಕಾರಿಗಳು ಸೂಚಿಸಿದ ಹಿನ್ನಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಯುವ ಕಾಂಗ್ರೆಸ್ ನಾಯಕಿಗೆ ಚೂರಿ ಇರಿತ

ಎಸಿಬಿ ದಾಳಿ : ಮುಜರಾಯಿ ತಹಶೀಲ್ದಾರ್ ಬಂಧನ

ಮಹಿಳೆಯರ ಏಷ್ಯಾಕಪ್​ ಹಾಕಿ ಟೂರ್ನಿ: ಮಲೇಷ್ಯಾ ವಿರುದ್ಧ ಭಾರತ ತಂಡಕ್ಕೆ ಭರ್ಜರಿ ಗೆಲುವು

ಮತ್ತೆ ಕಂಪಿಸಿದ ಭೂಮಿ; ಭಯಭೀತರಾದ ಜನತೆ

ಸಿಎಂ ಹತ್ಯೆ ಮಾಡುವುದಾಗಿ ಬೆದರಿಕೆ: ನಟ ಪವನ್ ಕಲ್ಯಾಣ್ ಅಭಿಮಾನಿ ಬಂಧನ

 

ಇತ್ತೀಚಿನ ಸುದ್ದಿ