ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿಗೆ  ಅವಕಾಶ - Mahanayaka
3:51 AM Saturday 18 - October 2025

ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿಗೆ  ಅವಕಾಶ

19/11/2020

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ಆರಂಭಿಸಲಾಗಿದೆ.


Provided by

ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಆರಂಭಿಸಲಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ತೆಗೆದು ಹಾಕುವುದಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಮತದಾರರ ಪಟ್ಟಿಗೆ ಹೆಸರು ಸೇರಿಸುವುದು, ತಿದ್ದುಪಡಿ, ಪಟ್ಟಿಯಿಂದ ಹೆಸರು ತೆಗೆದು ಹಾಕುವುದಕ್ಕೆ ಡಿಸೆಂಬರ್ 17ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನ.22, 29 ಮತ್ತು ಡಿ. 6 ಮತ್ತು 16ರಂದು ವಿಶೇಷ ಪ್ರಚಾರ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಹೊಸದಾಗಿ ಸಲ್ಲಿಕೆಯಾಗಿ ಅರ್ಜಿಗಳನ್ನು ಇತ್ಯರ್ಥಗೊಳಿಸಲು ಜನವರಿ 7 ಕೊನೆಯ ದಿನವಾಗಿದೆ.  ಹೊಸ ಕರಡು ಮತದಾರರ ಪಟ್ಟಿಯನ್ನು ಜ.14ರೊಳಗೆ ಪ್ರಕಟಿಸಲಾಗುತ್ತದೆ. ಭಾವಚಿತ್ರ ಇರುವ ಅಂತಿಮ ಮತದಾರರ ಪಟ್ಟಿ ಜ.18ರಂದು ಪ್ರಕಟವಾಗಲಿದೆ.

ಇತ್ತೀಚಿನ ಸುದ್ದಿ