ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ​: ಎ ಎಸ್ ಐ ಮೇಲಿನ ಆರೋಪ ಸಾಬೀತು - Mahanayaka
6:25 PM Thursday 16 - October 2025

ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ​: ಎ ಎಸ್ ಐ ಮೇಲಿನ ಆರೋಪ ಸಾಬೀತು

thumakur
29/01/2022

ತುಮಕೂರು: ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಎಎಸ್ ಐ  ಉಮೇಶಯ್ಯ ವಿರುದ್ಧದ ಆರೋಪ ಸಾಬೀತಾಗಿದೆ.ನಿನ್ನೆ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಆರೋಪಿ ಎಎಸ್ಐ ಉಮೇಶಯ್ಯ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.


Provided by

2017ರ ಜ. 15ರ ನಸುಕಿನ ಜಾವ ತುಮಕೂರು ನಗರದ ಅಂತರಸನಹಳ್ಳಿ ಸೇತುವೆ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಠಾಣೆಯ ಎಎಸ್ ಐ ಆಗಿದ್ದ ಉಮೇಶಯ್ಯ, ದೇವಸ್ಥಾನಕ್ಕೆ ತೆರಳುತ್ತಿದ್ದ ಬುದ್ಧಿಮಾಂದ್ಯ ಯುವತಿಗೆ ಡ್ರಾಪ್​ ಕೊಡುವ ನೆಪದಲ್ಲಿ ಖಾಸಗಿ ಬೊಲೆರೋ ಜೀಪ್​ನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದ. ಈ ಸಂಬಂಧ ಯುವತಿ ಪೋಷಕರು ದೂರು ದಾಖಲಿಸಿದ್ದರು. ನಿನ್ನೆ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಆರೋಪಿ ಎಎಸ್ಐ ಉಮೇಶಯ್ಯ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.

ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿತ್ತು. ಸರ್ಕಾರಿ ಅಭಿಯೋಜಕಿ ವಿ.ಎ. ಕವಿತಾ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶ ಎಚ್.ಎಸ್.ಮಲ್ಲಿಕಾರ್ಜುನ ಸ್ವಾಮಿ ಅವರು, ಉಮೇಶಯ್ಯ ಅಪರಾಧಿ ಎಂದು ತೀರ್ಪು ನೀಡಿದ್ದಾರೆ. ಎರಡನೇ ಆರೋಪಿ ಖಾಸಗಿ ವಾಹನ ಚಾಲಕ ಈಶ್ವರ ಎಂಬಾತನನ್ನು ಕೋರ್ಟ್​ ಆರೋಪ ಮುಕ್ತಗೊಳಿಸಿದೆ. ನ್ಯಾಯಾಲಯ ಜ. 31ರಂದು ಅಪರಾಧಿಗೆ ಶಿಕ್ಷೆ ಪ್ರಮಾಣ ಪ್ರಕಟ ಮಾಡಲಿದ್ದು, ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ ಮತ್ತು ಸಂತ್ರಸ್ತೆಗೆ ಪರಿಹಾರ ಸಿಗುವ ಸಾಧ್ಯತೆಯಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಲಕ್ಷಾಂತರ ರೂಪಾಯಿ ವಂಚನೆ: ಆರೋಪಿಯ ಬಂಧನ

ಸುಶಾಂತ್ ಸಿಂಗ್ ರಜಪೂತ್ ಡೆತ್​ ಕೇಸ್​: ಎನ್ ​ಸಿ ಬಿ ಯಿಂದ ಮತ್ತೋರ್ವ ಆರೋಪಿಯ ಬಂಧನ

ವಿದ್ಯಾರ್ಥಿನಿಯೊಂದಿಗೆ ರೊಮಾನ್ಸ್​ ಪ್ರಕರಣ: ಸೇವೆಯಿಂದ ಮುಖ್ಯಶಿಕ್ಷಕ ವಜಾ

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸ್ಫೋಟ: ನಾಲ್ವರು ಸಾವು, 10 ಮಂದಿಗೆ ಗಾಯ

ನಟಿ ಮೇಲೆ ಅತ್ಯಾಚಾರ ಆರೋಪ: ಸ್ಯಾಂಡಲ್ ವುಡ್ ನಟ, ನಿರ್ಮಾಪಕ ಬಂಧನ

 

ಇತ್ತೀಚಿನ ಸುದ್ದಿ