ಮಗುವಿಗೆ ಹಾಲುಣಿಸುತ್ತಿದ್ದ ವೇಳೆಯೇ ತಾಯಿಗೆ ಡಿಕ್ಕಿ ಹೊಡೆದ ಕಾರು: ತಾಯಿ ಸಾವು - Mahanayaka
5:31 AM Wednesday 15 - October 2025

ಮಗುವಿಗೆ ಹಾಲುಣಿಸುತ್ತಿದ್ದ ವೇಳೆಯೇ ತಾಯಿಗೆ ಡಿಕ್ಕಿ ಹೊಡೆದ ಕಾರು: ತಾಯಿ ಸಾವು

car accident
03/02/2022

ಮುಂಬೈ:  ಮಗುವಿಗೆ ಹಾಲುಣಿಸುತ್ತಿದ್ದ ವೇಳೆಯೇ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಮಹಿಳೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.


Provided by

ಮುಂಬೈಯ ಬೋರಿವ್ಲಿ ವೆಸ್ಟ್‌ ನ ಕೋರಾ ಸಿಗ್ನಲ್‌ ನಲ್ಲಿ ಈ ಘಟನೆ ನಡೆದಿದ್ದು,  ಸುಮಾರು 29 ವರ್ಷ ವಯಸ್ಸಿನ ಮಹಿಳೆಯೊಬ್ಬರು ಬಲೂನ್ ಮಾರಾಟ ಮಾಡುತ್ತಿದ್ದು, ಮಗುವಿಗೆ ಹಾಲುಣಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಮಹಿಳೆಯ ಮೇಲೆಯೇ ಹರಿದಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣವೇ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.  ಇನ್ನೂ, ಮಗುವನ್ನು ಕೂಡ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಗು ಪ್ರಾಣಾಪಾಯದಿಂದ ಪಾರಾಗಿದೆ.

ಅಪಘಾತ ನಡೆಸಿದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಹುಡುಗಾಟ ನಡೆಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಂಗನವಾಡಿ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರ ಆರಂಭ ವಿರೋಧಿಸಿ ಪ್ರತಿಭಟನೆ

ನಿಂತಿದ್ದ ಟ್ಯಾಂಕರ್‌ ಗೆ​ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಸಾವಿನಲ್ಲೂ ಹಲವರಿಗೆ ಜೀವ ಕೊಟ್ಟ 14 ವರ್ಷದ ಬಾಲಕ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್:  ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಸಿನಿಮೀಯ ಶೈಲಿಯಲ್ಲಿ ಇಂಜಿನಿಯರ್ ಅಪಹರಣ ಪ್ರಕರಣ: ಮೂರು ಗಂಟೆಯಲ್ಲೇ 6 ಮಂದಿಯ ಬಂಧನ

 

ಇತ್ತೀಚಿನ ಸುದ್ದಿ