ಹೈಟೆಕ್​ ವೇಶ್ಯಾವಾಟಿಕೆ ದಂಧೆ: ಕಾಲೇಜು ವಿದ್ಯಾರ್ಥಿನಿಯರು ಸೇರಿ ನಾಲ್ವರು ಯುವತಿಯರ ರಕ್ಷಣೆ - Mahanayaka

ಹೈಟೆಕ್​ ವೇಶ್ಯಾವಾಟಿಕೆ ದಂಧೆ: ಕಾಲೇಜು ವಿದ್ಯಾರ್ಥಿನಿಯರು ಸೇರಿ ನಾಲ್ವರು ಯುವತಿಯರ ರಕ್ಷಣೆ

manglore
03/02/2022

ಮಂಗಳೂರು: ಇಬ್ಬರು ಅಪ್ರಾಪ್ತೆಯರು ಸೇರಿ ನಾಲ್ವರನ್ನು ಹೈಟೆಕ್​ ವೇಶ್ಯಾವಾಟಿಕೆಗೆ ತಳ್ಳಿರುವ ಆರೋಪದ ಮೇಲೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಸೇರಿ ಮತ್ತಿಬ್ಬರು ಯುವತಿಯರಿಗೆ ಬೆದರಿಕೆ, ಆಮಿಷಗಳನ್ನೊಡ್ಡಿ ವೇಶ್ಯಾವಾಟಿಕೆಗೆ ಪ್ರೇರೇಪಿಸಿದ್ದರು. ನಗರದ ನಂದಿಗುಡ್ಡದ ರಿಯೋನಾ ರೆಸಿಡೆನ್ಸಿಯ ಐದನೇ ಮಹಡಿಯ ಬಾಡಿಗೆ ಕೊಠಡಿಯಲ್ಲಿ ಆರೋಪಿಗಳು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇವರು ನಡೆಸುತ್ತಿದ್ದ ವೇಶ್ಯಾವಾಟಿಕೆಗೆ‌ ಕೇರಳ ಮೂಲದವರೇ ಗ್ರಾಹಕರಾಗಿದ್ದರು. ಅಪ್ರಾಪ್ತೆಯೊಬ್ಬಳು ಈ ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿರುವ ವಿಚಾರ ಆಕೆಯ ಕಾಲೇಜಿನ ಪ್ರಾಂಶುಪಾಲೆಗೆ ತಿಳಿದು ಅವರು ಚೈಲ್ಡ್ ಕೇರ್​​ಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಮಂಗಳೂರು ಪೊಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ರೆಸಿಡೆನ್ಸಿ ಮೇಲೆ ದಾಳಿ ನಡೆಸಿ ಇಬ್ಬರು ಮಹಿಳೆಯರು, ಓರ್ವ ಪುರುಷನನ್ನು ಬಂಧಿಸಿದ್ದಾರೆ. ‌ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ, ವೇಶ್ಯಾವಾಟಿಕೆ ನಡೆಸಿರುವ ಪ್ರಕರಣ ದಾಖಲಾಗಿದೆ. ಈ ಕುರಿತು ಹೆಚ್ಚಿನ ತನಿಖೆಗೆ ಸಿಸಿಬಿಗೆ ಒಪ್ಪಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗೆಳತಿಯನ್ನು ಬ್ಯಾಗ್ ನಲ್ಲಿ ತುಂಬಿ ಹಾಸ್ಟೆಲ್ ಗೆ ಕೊಂಡೊಯ್ದ ಯುವಕ! | ವಿಡಿಯೋ ವೈರಲ್

ಮಗುವಿಗೆ ಹಾಲುಣಿಸುತ್ತಿದ್ದ ವೇಳೆಯೇ ತಾಯಿಗೆ ಡಿಕ್ಕಿ ಹೊಡೆದ ಕಾರು: ತಾಯಿ ಸಾವು

ಅಂಗನವಾಡಿ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರ ಆರಂಭ ವಿರೋಧಿಸಿ ಪ್ರತಿಭಟನೆ

ಸಾವಿನಲ್ಲೂ ಹಲವರಿಗೆ ಜೀವ ಕೊಟ್ಟ 14 ವರ್ಷದ ಬಾಲಕ

ಮಾಟ-ಮಂತ್ರದ ಭಯ ಹುಟ್ಟಿಸಿ ಲಕ್ಷಾಂತರ ರೂ. ದೋಚಿರುವ ಮಂತ್ರವಾದಿಯ ಬಂಧನ

 

ಇತ್ತೀಚಿನ ಸುದ್ದಿ

deneme bonusu veren siteler gamdom giriş deneme bonusu veren siteler