ತಲೆ ಮೇಲೆ ಮರದ ಕೊಂಬೆ ಬಿದ್ದು ಕೋಮಾದಲ್ಲಿದ್ದ ಬಾಲಕಿ ಸಾವು - Mahanayaka
1:07 AM Saturday 6 - September 2025

ತಲೆ ಮೇಲೆ ಮರದ ಕೊಂಬೆ ಬಿದ್ದು ಕೋಮಾದಲ್ಲಿದ್ದ ಬಾಲಕಿ ಸಾವು

prisha
11/02/2022

ಬೆಂಗಳೂರು: ಮರದ ಕೊಂಬೆ ತಲೆ ಮೇಲೆ ಬಿದ್ದ ಪರಿಣಾಮ ಪ್ರಜ್ಞೆ ಕಳೆದುಕೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಇಲ್ಲಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಡೆದಿದೆ.


Provided by

ಎರಡನೇ ತರಗತಿ ಓದುತ್ತಿದ್ದ ರೈಚಲ್‌ ಪ್ರಿಷಾ(8) ಮೃತ ಬಾಲಕಿ. ಈಕೆ ಪರೀಕ್ಷಾ ಪ್ರವೇಶ ಪತ್ರ ತರಲೆಂದು 2020ರ ಮಾ. 11ರಂದು ತಂದೆಯೊಂದಿಗೆ ಬೈಕ್‌ನಲ್ಲಿ ಶಾಲೆಗೆ ತೆರಳಿದ್ದಳು. ಕೌದೇನಹಳ್ಳಿ ಮುಖ್ಯರಸ್ತೆಯಲ್ಲಿ ಅರಳಿ ಮರದ ಕೊಂಬೆಯೊಂದು ಆಕೆಯ ತಲೆ ಮೇಲೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರಿಂದ ತಲೆಗೆ ಗಂಭೀರ ಗಾಯವಾಗಿದ್ದು, ಕೋಮಾ ಸ್ಥಿತಿಗೆ ತಲುಪಿದ್ದಳು. ತಕ್ಷಣ ಕೋಶಿಷ್‌ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇಬ್ಬರು ಸಹೋದರಿಯರು ನಾಪತ್ತೆ: ದೂರು ದಾಖಲು

ಸಾಲಭಾದೆ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಸಬ್ ಇನ್ಸ್ ಪೆಕ್ಟರ್ ನ ಕಾರಿನ ಗಾಜು ಒಡೆದು, ಹಣ ಲ್ಯಾಪ್ ಟಾಪ್ ದೋಚಿದ ಕಳ್ಳ!

ಬಾವಿಯಲ್ಲಿ ಪಿಯುಸಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ

ಸಮವಸ್ತ್ರ ವಿವಾದ: ಹೈಕೋರ್ಟ್ ನಿಂದ ಮಧ್ಯಂತರ ಆದೇಶ

ಹಣಕಾಸಿನ ವಿಚಾರಕ್ಕೆ ಪತಿ, ಮಾವನಿಂದ ಮಹಿಳೆಯ ಕೊಲೆ

ಇತ್ತೀಚಿನ ಸುದ್ದಿ