ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು - Mahanayaka
8:19 AM Wednesday 15 - October 2025

ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು

car
16/02/2022

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ  ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.


Provided by

ಮೃತರನ್ನು ತಮಿಳುನಾಡು ಮೂಲದ ವೈಷ್ಣವಿ, ಭರತ್, ಸಿರಿಲ್ ಮತ್ತು ವೆಂಕಟ್ ಎಂದು ಗುರುತಿಸಲಾಗಿದೆ. ಗಾಯಗೊಂಡವರು ಸಿರಿ ಕೃಷ್ಣ ಮತ್ತು ಅಂಕಿತಾ ರೆಡ್ಡಿ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳು ಕೋಲಾರದ ಕೆಫೆ ಕೇಂದ್ರದಿಂದ ಹಿಂದಿರುಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಇನ್ನೊಂದು ಬದಿಗೆ ಹಾರಿ ಲಾರಿಗೆ ಸಿಲುಕಿ ನಜ್ಜುಗುಜ್ಜಾಗಿದೆ. ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಘಟನೆ ಸಂಬಂಧ ಹೊಸಕೋಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ: ಸಚಿವ ಈಶ್ವರಪ್ಪ ಕೈ ಬಿಡುವಂತೆ ಆಗ್ರಹಿಸಿ ನಿಲುವಳಿ ಸೂಚನೆ; ಸಿದ್ದರಾಮಯ್ಯ

ಬಾವಿಗೆ ಬಿದ್ದು ಬಾಲಕಿ ಸಾವು: ತಾಯಿ ವಿರುದ್ಧ ತಂದೆಯಿಂದಲೇ ಕೊಲೆ ಆರೋಪ

ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯನ್ನು ಅಟ್ಟಾಡಿಸಿ ವಿಡಿಯೋ ಮಾಡಿದ ಪತ್ರಕರ್ತ!

ವಿದೇಶಿ ಮಹಿಳೆಯಿಂದ ಕ್ಯಾಬ್ ಚಾಲಕನಿಗೆ ಚಾಕುವಿನಿಂದ ಇರಿತ

ಇತ್ತೀಚಿನ ಸುದ್ದಿ