ಮದುವೆ ಸಂಭ್ರಮದ ವೇಳೆ ಒಂದು ಕ್ಷಣದಲ್ಲೇ ನಡೆದಿತ್ತು ದುರಂತ: 13 ಮಂದಿಯ ದಾರುಣ ಸಾವು - Mahanayaka
11:15 AM Wednesday 20 - August 2025

ಮದುವೆ ಸಂಭ್ರಮದ ವೇಳೆ ಒಂದು ಕ್ಷಣದಲ್ಲೇ ನಡೆದಿತ್ತು ದುರಂತ: 13 ಮಂದಿಯ ದಾರುಣ ಸಾವು

kushinagar
17/02/2022


Provided by

ಕುಶಿನಗರ: ಮದುವೆ ಕಾರ್ಯಕ್ರಮದ ವೇಳೆ ಚಪ್ಪಡಿ ಕುಸಿದು 13  ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ತಡ ರಾತ್ರಿ ನಡೆದಿದ್ದು, ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ಸ್ಮಶಾನ ಮೌನ ಆವರಿಸಿದೆ.

ಉತ್ತರ ಪ್ರದೇಶದ ಕುಶಿನಗರದಲ್ಲಿ ಈ ಘಟನೆ ನಡೆದಿದ್ದು, ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಮದುವೆ ಸಂಭ್ರಮದಲ್ಲಿದ್ದ ಮಹಿಳೆಯರು ಹಾಗೂ ಮಕ್ಕಳು ಚಪ್ಪಡಿಯ ಮೇಲೆ ಕುಳಿತಿದ್ದರು. ಅತಿಯಾದ ಭಾರ ಒಂದೆಡೆ ಕೇಂದ್ರೀಕೃತವಾದ ಕಾರಣ ಚಪ್ಪಡಿ ಕುಸಿದು ಬಿದ್ದಿದ್ದು, ಪರಿಣಾಮವಾಗಿ 11  ಮಂದಿ ಮೃತಪಟ್ಟಿದ್ದರು. ಇದೀಗ ಇನ್ನಿಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.

ಸ್ಥಳದಲ್ಲಿ ಮೃತರ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ. ಈಗಾಗಲೇ ಮೃತರ ಕುಟುಂಬಕ್ಕೆ ತಲಾ 4  ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಕೇಂದ್ರ ಸರ್ಕಾರದಿಂದ ತಲಾ ೨ ಲಕ್ಷ ರೂಪಾಯಿ ಪರಿಹಾರ ನೀಡುವ ಭರವಸೆ ದೊರೆತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

13 ಅಪ್ರಾಪ್ತ ವಿದ್ಯಾರ್ಥಿನಿಯರ ಅತ್ಯಾಚಾರ: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ ಮತ್ತು ಪತ್ನಿ: ಪತ್ನಿಯ ದಾರುಣ ಸಾವು

ಪ್ರೇಮ ನಿವೇದನೆ ತಿರಸ್ಕರಿಸಿದ್ದಕ್ಕೆ ಹಾಡ ಹಗಲೇ ಯುವತಿಯ ಕತ್ತು ಸೀಳಿದ ಪಾಗಲ್ ಪ್ರೇಮಿ!

ಸಚಿವ ಈಶ್ವರಪ್ಪ  ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ

ಇತ್ತೀಚಿನ ಸುದ್ದಿ