ನೀಲಿ ಸಾಗರವಾದ ಬೆಂಗಳೂರು: ವಿಧಾನಸೌಧ-ಹೈಕೋರ್ಟ್ ಚಲೋ ಬೃಹತ್ ಪ್ರತಿಭಟನೆ

ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ಸೂಚಿಸಿದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ನೀಲಿ ಪಡೆ ಸಿಡಿದೆದ್ದಿದ್ದು, ಇಂದು ಬೆಂಗಳೂರಿನಲ್ಲಿ ವಿವಿಧ ಸಂವಿಧಾನ ಪರ ಸಂಘಟನೆಗಳು‘ವಿಧಾನಸೌಧ-ಹೈಕೋರ್ಟ್ ಚಲೋ’ ಬೃಹತ್ ಪ್ರತಿಭಟನೆ ನಡೆಸಿದವು.
ರಾಜ್ಯದ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಆಗಮಿಸಿರುವ ಜನರು ಬೃಹತ್ ಪ್ರತಿಭಟನೆಗೆ ಸಾಕ್ಷಿಯಾಗಿದ್ದು, ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಜಾಕ್ಕೆ ಹಾಗೂ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಲು ಒತ್ತಾಯಿಸಿದರು.
ನ್ಯಾಯಾಲಯಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ರವರ ಭಾವಚಿತ್ರವನ್ನು ಅಳವಡಿಸಬೇಕು. ಗಣ ರಾಜ್ಯೋತ್ಸವ ದಿನದಂದು ಅಂಬೇಡ್ಕರ್ ರವರ ಬಗ್ಗೆ ಅಪಮಾನ ಮಾಡಿರುವ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪಾಟೀಲ್ ಗೆ ತಕ್ಕ ಶಿಕ್ಷೆ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನವಾದರೆ, ಈ ನೆಲದ ಶೋಷಿತರು ಸುಮ್ಮನಿರಲ್ಲ ಎನ್ನುವ ಸಂದೇಶವನ್ನು ರವಾನಿಸಿದ ಸಂವಿಧಾನ ಪರ ಸಂಘಟನೆಗಳು, ಇಡೀ ಬೆಂಗಳೂರನ್ನು ನೀಲಿಮಯಗೊಳಿಸಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಚಿವ ಈಶ್ವರಪ್ಪ ಭಾವಚಿತ್ರಕ್ಕೆ ಬಿಜೆಪಿ ಮುಖಂಡರಿಂದ ಹಾಲಿನ ಅಭಿಷೇಕ
ಜಮ್ಮು ಕಾಶ್ಮಿರದಲ್ಲಿ ಗುಂಡಿನ ಚಕಮಕಿ: ಉಗ್ರನ ಹತ್ಯೆ; ಇಬ್ಬರು ಯೋಧರು ಹುತಾತ್ಮ
ದಲಿತ ಕುಟುಂಬಕ್ಕೆ, ನ್ಯಾಯಾಲಯಕ್ಕೆ ವಂಚನೆ: ವಕೀಲನಿಗೆ ಜೀವಾವಧಿ ಶಿಕ್ಷೆ
ಫ್ಲ್ಯಾಟ್ ನೊಳಗೆ ಅರೆನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ದೂರು ದಾಖಲು
ಆಸ್ತಿ ವಿಚಾರ: ಹೆತ್ತ ತಾಯಿಗೆ ಕ್ರೂರವಾಗಿ ಥಳಿಸಿದ ಮಗ