ಎಸೆಸೆಲ್ಸಿ ಪಾಸ್ ಆದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ 2,582 ಹುದ್ದೆಗಳು ಖಾಲಿ | ಈಗಲೇ ಅರ್ಜಿ ಸಲ್ಲಿಸಿ - Mahanayaka
11:42 PM Friday 11 - September 2026

ಎಸೆಸೆಲ್ಸಿ ಪಾಸ್ ಆದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ 2,582 ಹುದ್ದೆಗಳು ಖಾಲಿ | ಈಗಲೇ ಅರ್ಜಿ ಸಲ್ಲಿಸಿ

23/11/2020

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ (ಜಿಡಿಎಸ್) ಹುದ್ದೆಗಳಿಗೆ  ಅರ್ಜಿ ಆಹ್ವಾನಿಸಲಾಗಿದೆ. ಸುಮಾರು 2,582 ಗ್ರಾಮೀಣ ಡಾಕ್​​ ಸೇವಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.

ವಿದ್ಯಾರ್ಹತೆ: ಎಸೆಸೆಲ್ಸಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. -ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ವೇತನ: ಗ್ರಾಮೀಣ ಡಾಕ್​ ಸೇವಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,200- ರಿಂದ 22,000-ರೂ ವೇತನವನ್ನು ನೀಡಲಾಗುವುದು. ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 100-ರೂ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 100-ರೂ, ಪ.ಜಾ, ಪ.ಪಂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಡಿಸೆಂಬರ್​ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಅಭ್ಯರ್ಥಿಗಳು ಅಧಿಕೃತ ವೆಬ್‌ ಸೈಟ್ http://appost.in/gdsonline/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕಾಗಿದೆ. ಡಿಸೆಂಬರ್ 11, 2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.


ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler