ಹಿಜಾಬ್ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯ ತಂದೆಯ ರೆಸ್ಟೋರೆಂಟ್ ಮೇಲೆ ತಂಡದಿಂದ ದಾಳಿ - Mahanayaka

ಹಿಜಾಬ್ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯ ತಂದೆಯ ರೆಸ್ಟೋರೆಂಟ್ ಮೇಲೆ ತಂಡದಿಂದ ದಾಳಿ

restorent1
22/02/2022


Provided by

ಉಡುಪಿ: ಹಿಜಾಬ್ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯ ತಂದೆಗೆ ಸೇರಿದ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ 9.30ರ ಸುಮಾರಿಗೆ ಮಲ್ಪೆಯಲ್ಲಿ ನಡೆದಿದೆ.

ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದಿದ್ದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಲೇಜು ವಿದ್ಯಾರ್ಥಿನಿ ಶಿಫಾ ಅವರ ತಂದೆ ಹೈದರ್ ಅಲಿ ಅವರಿಗೆ ಸೇರಿದ ‘ಬಿಸ್ಮಿಲ್ಲಾ ಹೊಟೇಲ್’ ಮೇಲೆ 50 ಜನರ ಗುಂಪು ಕಲ್ಲು ತೂರಾಟ ನಡೆಸಿದೆ. ಇದರಿಂದ ರೆಸ್ಟೋರೆಂಟ್‌ನ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುಂಪನ್ನು ಚದುರಿಸಿದ್ದಾರೆ.

ದುಷ್ಕರ್ಮಿಗಳ ಗುಂಪು ಹೈದರ್ ಅವರ ಮಗ ಸೈಫ್ (20) ಮೇಲೆ ಹಲ್ಲೆ ನಡೆಸಿದ್ದು, ಅವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಸಂಬಂಧ ಮಲ್ಪೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹರ್ಷ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮದುವೆ ಮುಗಿಸಿ ಬರುತ್ತಿದ್ದ ವಾಹನ ಕಮರಿಗೆ ಉರುಳಿ ಬಿದ್ದು10 ಮಂದಿ ಸಾವು

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ

ಕೊಲಂಬಿಯಾದಲ್ಲಿ ಆರು ತಿಂಗಳವರೆಗೆ ಗರ್ಭಪಾತ ಅಪರಾಧವಲ್ಲ: ನ್ಯಾಯಾಲಯದ ಮಹತ್ವದ ತೀರ್ಪು

ಇತ್ತೀಚಿನ ಸುದ್ದಿ