ಭೀಕರ ಸ್ಫೋಟ: 11 ಮಂದಿ ಸಾವು; ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ - Mahanayaka
11:04 PM Thursday 11 - December 2025

ಭೀಕರ ಸ್ಫೋಟ: 11 ಮಂದಿ ಸಾವು; ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

fire
04/03/2022

ಪಾಟ್ನಾ: ಮನೆಯೊಂದರಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬಿಹಾರದ ಭಾಗಲ್ಪುರದಲ್ಲಿ ಗುರುವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾತಾರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಜ್ವಾಲಿಚಕ್‌ನಲ್ಲಿರುವ ಮನೆಯೊಂದರಲ್ಲಿ ರಾತ್ರಿ11.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಕನಿಷ್ಠ ಮೂರು ಮನೆಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಇನ್ನೂ ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭಾಗಲ್ಪುರ ಡಿಐಜಿ ಸುಜೀತ್ ಕುಮಾರ್ ಮಾಹಿತಿ ನೀಡಿದ್ದಾರೆ. ಸ್ಫೋಟದ ಶಬ್ದ ಇಡೀ ನಗರಕ್ಕೆ ಕೇಳಿಸಿದ್ದು, ಸ್ಫೋಟದ ನಂತರ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಆದರೆ, ಈ ಕುರಿತು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು
ರಸ್ತೆ ಅಪಘಾತ: ಸ್ಥಳದಲ್ಲೇ ಮೂವರು ಯೋಧರ ಸಾವು, ಇಬ್ಬರಿಗೆ ಗಂಭೀರ ಗಾಯ

ಯೂರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್‌ ಸ್ಥಾವರದ ಮೇಲೆ ರಷ್ಯಾ ದಾಳಿ

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಸ್ಕ್ರೂಡ್ರೈವರ್​ನಿಂದ ಚುಚ್ಚಿ ಪತ್ನಿಯ ಕೊಲೆಗೈದ ಪತಿ

ಇತ್ತೀಚಿನ ಸುದ್ದಿ