ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ:  11 ವರ್ಷದ ಬಾಲಕನ ದಾರುಣ ಸಾವು - Mahanayaka
12:50 AM Wednesday 15 - October 2025

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ:  11 ವರ್ಷದ ಬಾಲಕನ ದಾರುಣ ಸಾವು

death
08/03/2022

ವಿಟ್ಲ: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 11 ವರ್ಷ ವಯಸ್ಸಿನ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ಸೋಮವಾರ ಸಂಜೆ ನಡೆದಿದೆ.


Provided by

ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಅದ್ವಿತ್ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅದ್ವಿತ್ ನನ್ನು ತಕ್ಷಣವೇ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಬುಡೋಳಿಯ ವಿಸ್ಡಮ್ ಶಾಲೆಯಲ್ಲಿ 6ನೇ ತರಗತಿಯಲ್ಲಿ ಕಲಿಯುತ್ತಿದ್ದ ಅದ್ವಿತ್ ಸಂಜೆ ಶಾಲೆ ಬಿಟ್ಟ ಬಳಿಕ ತನ್ನ ತಂದೆಯ ಜೊತೆಗೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ.

ಇನ್ನೂ ಪರಾರಿಯಾದ ಲಾರಿಯನ್ನು ನೆಲ್ಯಾಡಿಯಲ್ಲಿ ಸ್ಥಳೀಯರು ಪತ್ತೆ ಹಚ್ಚಿದ್ದಾರೆ. ಅಪಘಾತದ ತೀವ್ರತೆಗೆ  ಸ್ಕೂಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮನೆಗೆ ಬೆಂಕಿ ಬಿದ್ದು ಒಂದೇ ಕುಟುಂಬದ ಐವರು ಸಜೀವ ದಹನ

ಬಾಬಾ ಸಾಹೇಬ ಅಂಬೇಡ್ಕರ್ ಅವರ ಜನ್ಮಭೂಮಿಗಾಗಿ ಹೋರಾಡಿದ ಧರ್ಮಶೀಲ ಭಂತೇಜಿ

ಈರುಳ್ಳಿ ಸೇವನೆಯಿಂದಾಗುವ ಪ್ರಯೋಜನಗಳೇನು?

ಸರ್ಕಾರಿ ವೈದ್ಯರು ಖಾಸಗಿ ಕಂಪೆನಿ ಔಷಧ ಸೂಚಿಸಿದರೆ ಕ್ರಮ: ಸಚಿವ ಸುಧಾಕರ್

ಆಸ್ತಿಗಾಗಿ ತಂದೆಯನ್ನು ಭೀಕರವಾಗಿ ಹತ್ಯೆಗೈದ ಪುತ್ರ: ಬೆಚ್ಚಿ ಬಿದ್ದ ಗ್ರಾಮಸ್ಥರು

ಇತ್ತೀಚಿನ ಸುದ್ದಿ