ಉಕ್ರೇನ್‌ ನಲ್ಲಿ ಶೆಲ್ ದಾಳಿ ನಿಂತ ಬಳಿಕ ನವೀನ್ ಮೃತದೇಹ ತರುವ ಪ್ರಯತ್ನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - Mahanayaka

ಉಕ್ರೇನ್‌ ನಲ್ಲಿ ಶೆಲ್ ದಾಳಿ ನಿಂತ ಬಳಿಕ ನವೀನ್ ಮೃತದೇಹ ತರುವ ಪ್ರಯತ್ನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

naveen
09/03/2022


Provided by

ಬೆಂಗಳೂರು: ಉಕ್ರೇನ್‌ ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಗೆ ಸಾವನ್ನಪ್ಪಿರುವ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ನ ಮೃತದೇಹವನ್ನು ಶವಾಗಾರಲ್ಲಿ ಇರಿಸಲಾಗಿದ್ದು, ಯುದ್ಧನಿಂತ ಬಳಿಕ ಮೃತದೇಹವನ್ನು ತರುವ ಪ್ರಯತ್ನ ಮಾಡಲಾಗುವುದು ಎಂದು ವಿದೇಶಾಂಗ ಸಚಿವ ಜೈಶಂಕರ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿ, ನವೀನ್ ಮೃತದೇಹವನ್ನು ತರಲು ನಮ್ಮ ಸರ್ಕಾರ ಎಲ್ಲಾ ರೀತಿಯಿಂದಲೂ ಪ್ರಯತ್ನ ಮಾಡುತ್ತಿದ್ದು, ಸಂಬಂಧಪಟ್ಟ ರಾಯಭಾರ ಕಚೇರಿ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ಸಚಿವರು ಹೇಳಿದ್ದಾರೆ ಎಂದರು.

ಉಕ್ರೇನ್‍ ನ ಕೆಲವು ಪ್ರಮುಖ ನಗರಗಳಲ್ಲಿ ಈಗಲೂ ಪರಿಸ್ಥಿತಿ ಹೇಳಿಕೊಳ್ಳುವಂತಿಲ್ಲ. ಅಲ್ಲಿ ನಿರಂತರವಾಗಿ ಬಾಂಬ್ ದಾಳಿ, ಶೆಲ್ ದಾಳಿ, ಗುಂಡಿನ ಚಕಮಕಿ ನಡೆಯುತ್ತಲೇ ಇದೆ. ಸಮಯ ಮತ್ತು ಪರಿಸ್ಥಿತಿ ನೋಡಿಕೊಂಡು ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪೊಲೀಸರಿಗೆ ಹೆದರಿ ಟಿಡಿಪಿ ಕಾರ್ಯಕರ್ತ ಆತ್ಮಹತ್ಯೆ

ರಷ್ಯಾ ಭಯೋತ್ಪಾದಕ ದೇಶ ಎಂದು ಘೋಷಿಸಿ: ಬ್ರಿಟನ್‌ ಸಂಸತ್ತಿಗೆ ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ ಮನವಿ

ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಅರ್ಪಿಸಿದ ಪಾಕ್ ಯುವತಿ

ಹೈಟೆಕ್​​​ ವೇಶ್ಯಾವಾಟಿಕೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ

ಚಾಕು ಇರಿದು ವ್ಯಕ್ತಿಯ ಕೊಲೆ ಯತ್ನ

 

ಇತ್ತೀಚಿನ ಸುದ್ದಿ