ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: ನಿವೃತ್ತ ಎಸ್‌ ಐ ಪತ್ನಿ ಸಾವು - Mahanayaka

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: ನಿವೃತ್ತ ಎಸ್‌ ಐ ಪತ್ನಿ ಸಾವು

thenka yermal
15/03/2022


Provided by

ಪಡುಬಿದ್ರಿ: ಇಲ್ಲಿನ ತೆಂಕ ಎರ್ಮಾಳು ಎಂಬಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

ಉಡುಪಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆಯ ನಿವೃತ್ತ ಎಸ್‌ಐ ಶ್ರೀನಿವಾಸ್ ಅವರ ಪತ್ನಿ ಉಡುಪಿ ಚಿಟ್ಟಾಡಿ ನಿವಾಸಿ ಭವಾನಿ (58) ಮೃತ ಮಹಿಳೆ.
ಇವರು ಪ್ರಯಾಣಿಸುತ್ತಿದ್ದ ಆಲ್ಟೋ ಕಾರು ಮಂಗಳೂರಿನಿಂದ ಉಡುಪಿಯತ್ತ ಬರುತ್ತಿದ್ದಾಗ ತೆಂಕ ಎರ್ಮಾಳಿನಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಈ ಘಟನೆ ನಡೆದಿದೆ.

ಈ ಘಟನೆಯಿಂದ ಭವಾನಿ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರ ಸಹಕಾರದಿಂದ ವರನ್ನು ಕಾರಿನಿಂದ ಹೊರ ತೆಗೆದು ಉಡುಪಿ ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.

ಈ ವೇಳೆ ಕಾರು ಚಲಾಯಿಸುತ್ತಿದ್ದ ಅವರ ಮಗ ತಾರಾನಾಥ್ (35) ಅವರಿಗೂ ಗಾಯಗಳಾಗಿವೆ. ಈ ಘಟನೆ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

OTT ಗೆ ಸೆಲ್ಯೂಟ್;  ದುಲ್ಕರ್ ನಿರ್ಮಾಣ ಕಂಪನಿಯನ್ನು ಬ್ಯಾನ್ ಮಾಡಿದ ಫಿಯೋಕ್

ಹಿಜಾಬ್ ಧರಿಸಿದರೆ ಏನು ಸಮಸ್ಯೆ: ಅಸಾದುದ್ದೀನ್ ಓವೈಸಿ

ಹಿಜಾಬ್ ವಿವಾದ: ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ; ಸಿ.ಎಂ.ಇಬ್ರಾಹಿಂ

ಕಾಶ್ಮೀರದಲ್ಲಿ ಪಂಡಿತರಿಗಿಂತ ಮುಸ್ಲಿಂಮರೇ ಹೆಚ್ಚು ಹತ್ಯೆಯಾಗಿದ್ದಾರೆ!

ಇತ್ತೀಚಿನ ಸುದ್ದಿ