ಉಕ್ರೇನ್ ನಿಂದ ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ - Mahanayaka

ಉಕ್ರೇನ್ ನಿಂದ ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

ukraine indian students
22/03/2022


Provided by

ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ರಾಷ್ಟ್ರದಿಂದ ತಾಯ್ನಾಡಿಗೆ ವಾಪಾಸಾಗಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರಕಾರ ಸಿಹಿ ಸುದ್ದಿಯನ್ನು ನೀಡಿದ್ದು,. ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಅವರಿಗೆ ಶಿಕ್ಷಣವನ್ನು ಮುಂದುವರಿಸಲು ಅವಕಾಶ ನೀಡಿದೆ. ಸಂಪೂರ್ಣವಾಗಿ ಉಚಿತವಾಗಿ ಶಿಕ್ಷಣ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, “ಸದ್ಯಕ್ಕೆ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ನೊಂದಣಿ ಮಾಡಿಕೊಳ್ಳುತ್ತಿಲ್ಲ. ಆದರೆ ಅವರ ಕಲಿಕೆ ತರಬೇತಿಯನ್ನು ಇಲ್ಲಿ ಮುಂದುವರೆಸಲಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ. ಉಚಿತವಾಗಿ ಶಿಕ್ಷಣವನ್ನು ಮುಂದುವರಿಸಬಹುದು” ಎಂದಿದ್ದಾರೆ.

ಸೋಮವಾರ ಸಚಿವರು ವಿಧಾನಸೌಧದಲ್ಲಿ ಉಕ್ರೇನ್‌‌ ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳ ಜೊತೆ ಸಭೆ ನಡೆಸಿ ಈ ಮಹತ್ವದ ತೀರ್ಮಾನವನ್ನು ಘೋಷಣೆ ಮಾಡಿದ್ದಾರೆ.

ಈ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉನ್ನತಮಟ್ಟದ ಸಮಿತಿ ರಚಿಸಲು ನಿರ್ಧಾರ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಪ್ರಾಪ್ತ ಮಕ್ಕಳನ್ನು ಬಿಟ್ಟು ಗೆಳೆಯನ  ಜತೆ ಓಡಿ ಹೋದ ತಾಯಿ

ಹಕ್ಕಿಯನ್ನು ಹುಡುಕಲು ಹೋದ ಮಕ್ಕಳು: ಅಮೆಜಾನ್ ಕಾಡಿನಲ್ಲಿ ಸಿಲುಕಿ 27 ದಿನ ಜೀವನ್ಮರಣ ಹೋರಾಟ

ರಸ್ತೆದಾಡುತ್ತಿದ್ದ ಬಾಲಕಿಗೆ ಡಿಕ್ಕಿ ಹೊಡೆದ ಬಿಬಿಎಂಪಿ ಕಸದ ಲಾರಿ: ಶಾಲಾ ಬಾಲಕಿ ಸಾವು

ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರ ದುರ್ಮರಣ

ಇತ್ತೀಚಿನ ಸುದ್ದಿ