ಆಘಾತಕಾರಿ ಘಟನೆ: 2 ತಿಂಗಳ ಹೆಣ್ಣು ಮಗುವನ್ನು ಕೊಲೆಗೈದು ಒಲೆಗೆಸೆದ ತಾಯಿ - Mahanayaka
5:20 AM Thursday 15 - January 2026

ಆಘಾತಕಾರಿ ಘಟನೆ: 2 ತಿಂಗಳ ಹೆಣ್ಣು ಮಗುವನ್ನು ಕೊಲೆಗೈದು ಒಲೆಗೆಸೆದ ತಾಯಿ

death
22/03/2022

ನವದೆಹಲಿ: ಗಂಡು ಮಗು ಹುಟ್ಟಲಿಲ್ಲ ಎಂಬ ಕಾರಣಕ್ಕೆ ಮನನೊಂದು ಮಹಿಳೆಯೊಬ್ಬಳು ತನ್ನ 2 ತಿಂಗಳ ಹೆಣ್ಣು ಮಗುವನ್ನು ಕತ್ತು ಹಿಸುಕಿ ಕೊಲೆಗೈದು ಬಳಿಕ ಒಲೆಗೆಸೆದಿರುವ ಆಘಾತಕಾರಿ ಘಟನೆ ದೆಹಲಿಯ ಮಾಳವೀಯ ನಗರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೊದಲು ಮಗು ನಾಪತ್ತೆಯಾಗಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಮಗುವಿನ ಕೊಲೆ ಮಾಡಿದ್ದ ತಾಯಿ ಮನೆ ಬಾಗಿಲು ಹಾಕಿಕೊಂಡು ಹೊರಗಡೆ ಬಾರದೆ ಇರುವುದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮಗುವನ್ನು ನೀರಿನ ತೊಟ್ಟೆಯಲ್ಲಿ ಎಸೆದಿರುವ ಶಂಕೆ ವ್ಯಕ್ತಪಡಿಸಿ, ಶೋಧಕಾರ್ಯ ಮುಂಧುವರಿಸಿದ್ದರು.

ಬಳಿ ಅಡುಗೆ ಮನೆಯಲ್ಲಿ ಶೋಧ ನಡೆಸಿದಾಗ ಮಗುವಿನ ಶವ ಒಲೆಯಲ್ಲಿ ಪತ್ತೆಯಾಗಿದೆ. ಪ್ರಕರಣದ ಸಂಬಂಧ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಮನೆಯಲ್ಲಿ ತೀರ ಬಡತನವಿದ್ದು, ಗಂಡು ಮಗುವಾಗಿದ್ದರೆ ದುಡಿದು ಸಾಕುತ್ತಿದ್ದನೆಂಬ ಕಾರಣದಿಂದ ಮಗುವನ್ನು ಕೊಲೆ ಮಾಡಿರುವುದಾಗಿ ತಾಯಿ ಹೇಳಿಕೆ ನೀಡಿದ್ದಾಳೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮತ್ತೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂ. ಏರಿಕೆ

ಬಿಗ್‌ ಶಾಕ್‌: ಭಾರೀ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ

ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಆರೋಪ: ವಿಜಯನಗರ ಪೊಲೀಸ್​ ಇನ್ಸ್​ಪೆಕ್ಟರ್ ಅಮಾನತು

ಎಸಿಬಿ ಶಾಕ್‌: ಬೆಳ್ಳಂಬೆಳಗ್ಗೆ ಬಿಡಿಎ ಬ್ರೋಕರ್‌ಗಳ ಮನೆ ಮೇಲೆ ದಾಳಿ

ಇತ್ತೀಚಿನ ಸುದ್ದಿ