ಕಾಶ್ಮೀರ ಹತ್ಯಾಕಾಂಡ: ಮರು ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ - Mahanayaka
9:02 AM Wednesday 10 - September 2025

ಕಾಶ್ಮೀರ ಹತ್ಯಾಕಾಂಡ: ಮರು ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

suprim court
25/03/2022

ನವದೆಹಲಿ: 1990ರಲ್ಲಿ ನಡೆದ ಕಾಶ್ಮೀರ ಪಂಡಿತರ ಹತ್ಯಾಕಾಂಡದ ಕುರಿತು ಮರು ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.


Provided by

ಕಾಶ್ಮೀರ ಪಂಡಿತರ ಸಂಘಟನೆ ‘ರೂಟ್‌ ಇನ್‌ ಕಾಶ್ಮೀರ್‌’ ಸುಪ್ರೀಂ ಕೋರ್ಟ್‌ಗೆ ಕ್ಯುರೇಟಿವ್‌ ಅರ್ಜಿಯನ್ನು ಸಲ್ಲಿಸಿದೆ. ಕೇವಲ ಊಹೆಯ ಆಧಾರದಲ್ಲಿ ಆರಂಭಿಕ ಹಂತದಲ್ಲಿ ರಿಟ್ ಅರ್ಜಿಯನ್ನು ವಜಾಗೊಳಿಸಿರುವುದು ಸರಿಯಲ್ಲ. 2007ರ ಜಪಾನಿ ಸಾಹೂ ವರ್ಸಸ್ ಚಂದ್ರ ಶೇಖರ್ ಮೊಹಂತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಪರಾಧ ಎಂದಿಗೂ ಸಾಯುವುದಿಲ್ಲ ಎಂದು ಹೇಳಿದೆ. ಹೀಗಾಗಿ ಮತ್ತೊಮ್ಮೆ ಅರ್ಜಿಯನ್ನು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದೆ.

ಅರ್ಜಿಯಲ್ಲಿ ಕೋರ್ಟ್‌ ಮುಂದೆ ಮೂರು ಬೇಡಿಕೆಯನ್ನು ಇರಿಸಲಾಗಿದೆ. ಈ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸೀನ್‌ ಮಲಿಕ್‌ ಮತ್ತು ಬಿಟ್ಟಾ ಕರಾಟೆಯನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಬೇಕು. ಹತ್ಯಾಕಾಂಡದ ಸಂಪೂರ್ಣ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು. ಮೂರನೇಯದಾಗಿ ಈ ಘಟನೆಯ ತನಿಖೆಗೆ ಸ್ವತಂತ್ರ ತನಿಖಾ ಆಯೋಗವನ್ನು ರಚಿಸಲು ಆದೇಶ ನೀಡಬೇಕು ಎಂಬ ಬೇಡಿಕೆಯನ್ನು ಇಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ತಮಿಳುನಾಡಿನ 16 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಟೀಕಿಸಿದಕ್ಕಾಗಿ ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ

ಡಾ.ಬಿ.ಆರ್.ಅಂಬೇಡ್ಕರ್ ಫ್ಲೆಕ್ಸ್ ಗೆ ಹಾನಿ: ಇಬ್ಬರು ಕಿಡಿಗೇಡಿಗಳ ಬಂಧನ

ಒಂದು ಕಣ್ಣಿನ ಮಗುವಿನ ಜನನ: ವಿಶ್ವದಲ್ಲೇ ಅಪರೂಪದ ಘಟನೆ

ಇತ್ತೀಚಿನ ಸುದ್ದಿ