ಬೆಳ್ಳಂಬೆಳಗ್ಗೆ ಜೆಸಿಬಿ ಸದ್ದು: ಉಡುಪಿಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷನ ಹೊಟೇಲ್ ತೆರವು
ಉಡುಪಿ: ನಗರದಲ್ಲಿ ಬೆಳ್ಳಂಬೆಳಗ್ಗೆ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಈ ವೇಳೆ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಝರಾ ನಿರ್ಮಿಸಿದ್ದ ಹೋಟೆಲ್‌ನ್ನು ತೆರವು ಮಾಡಲಾಗುತ್ತಿದೆ.
ನಗರಸಭೆ ಅಧಿಕಾರಿಗಳು ಜಾಮಿಯಾ ಮಸೀದಿ ಕಾಂಪ್ಲೆಕ್ಸ್‌ನಲ್ಲಿ ಜೆಸಿಬಿಗಳ ಮೂಲಕವಾಗಿ ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ. ಉಡುಪಿ ನಗರಸಭೆ ಹಲವು ಬಾರಿ ಹೊಟೇಲ್‍ಗೆ ನೊಟೀಸ್ ನೀಡಿತ್ತು. ನಗರಸಭೆಯ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಇಂದು ನಗರಸಭೆ ಸಿಬ್ಬಂದಿ, ಪೌರಕಾರ್ಮಿಕರು ಅಂಗಡಿಗಳ ತೆರವು ಮಾಡುತ್ತಿದ್ದಾರೆ.
ಹಿಜಬ್ ಹೋರಾಟದಲ್ಲಿ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿದ್ದ ಎಸ್‍ಡಿಪಿಐ, ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಅವರ ಝರಾ ಹೊಟೇಲ್ ಕಟ್ಟಡದಲ್ಲಿರುವ ಝೈತರ್ ಆನ್ ಎಂಬ ಮಳಿಗೆಯನ್ನೂ ತೆರವು ಮಾಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಲಯಾಳಂ ನಟ ಸುರೇಶ್ ಗೋಪಿಯ ವಿಚಿತ್ರ ಗಡ್ಡ ನೋಡಿ ವೆಂಕಯ್ಯ ನಾಯ್ಡು ಕೇಳಿದ್ದೇನು? | ವಿಡಿಯೋ ವೈರಲ್
ಪ್ರೇಯಸಿಯ ನಗ್ನ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕನ ಬಂಧನ
ಚಲಿಸುತ್ತಿದ್ದ ಬಸ್ಸಿನಲ್ಲಿ ಬಿಯರ್ ಕುಡಿದು ಡಾನ್ಸ್ ಮಾಡಿದ ವಿದ್ಯಾರ್ಥಿಗಳು!: ವಿಡಿಯೋ ವೈರಲ್
ಅರವಿಂದ್ ಕೇಜ್ರಿವಾಲ್ ‘ಅರ್ಬನ್ ನಕ್ಸಲ್’: ಬಿಜೆಪಿ ಮುಖಂಡ ಅಮಿತ್ ಮಾಳವಿಯಾ




























