8 ವರ್ಷದ ಬಾಲಕಿಯ ಅತ್ಯಾಚಾರ, ಕತ್ತು ಹಿಸುಕಿ ಕೊಲೆ | 6 ಮಂದಿಯ ಬಂಧನ - Mahanayaka

8 ವರ್ಷದ ಬಾಲಕಿಯ ಅತ್ಯಾಚಾರ, ಕತ್ತು ಹಿಸುಕಿ ಕೊಲೆ | 6 ಮಂದಿಯ ಬಂಧನ

30/11/2020

ಜೈಪುರ:  8 ವರ್ಷದ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಗಳು ಅತ್ಯಾಚಾರ ಎಸಗಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಪ್ರತಾಪ್ ಗಢದಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ತನ್ನ ತಾಯಿಯೊಂದಿಗೆ ಮಲಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ಎಸಗಿ  ಹತ್ಯೆಗೈದಿದ್ದು, ಬಾಲಕಿಯ ಮನೆಯಿಂದ 300 ಮೀಟರ್ ದೂರದಲ್ಲಿರುವ ಪಾಳು ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಘಟನೆಗೆ ಸಂಬಂಧಿಸಿದಂತೆ 6ಕ್ಕೂ ಅಧಿಕ ಜನರನ್ನು ವಿಚಾರಣೆಗೊಳಪಡಿಸಲಾಗಿದೆ. ಇನ್ನಷ್ಟು ಆರೋಪಿಗಳ ಬಂಧನ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ