ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯ: ಲೈಟ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ - Mahanayaka
11:24 PM Monday 15 - September 2025

ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯ: ಲೈಟ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

police
04/04/2022

ಒಡಿಶಾ: ಪ್ರೀತಿಸುವ ನಾಟಕವಾಡಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದೇ ಅಲ್ಲದೇ, ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಒಡಿಶಾದ ನಯಾಗಢದಲ್ಲಿ ನಡೆದಿದೆ.


Provided by

ಘಟನೆಗೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಪೈಕಿ 5 ಮಂದಿ ಮಹಿಳೆಯರು ಕೂಡ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಬಾಬು ಫರಿದಾ ಎಂಬಾತ ಪ್ರಮುಖ ಆರೋಪಿಯಾಗಿದ್ದು, ಮೂರು ತಿಂಗಳ ಹಿಂದೆ ಬಾಲಕಿಗೆ ಪರಿಚಯವಾಗಿದ್ದ ಈತ ಪ್ರೀತಿಸುವ ನಾಟಕವಾಡಿ,  ಬಾಲಕಿಯ ಮುಗ್ಧತೆಯನ್ನು ಬಳಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದ. ಇದಾದ ಬಳಿಕ ಈ ವಿಚಾರವನ್ನು  ಯಾರಿಗಾದರೂ ಹೇಳಿದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮಾರ್ಚ್ 31 ಬಾಲಕಿಯ 6 ತಂದೆ ಆರೋಪಿ ವಿರುದ್ಧ ದೂರು ದಾಖಲಿಸಿದ್ದು, ಇದರಿಂದ ಆಕ್ರೋಶಗೊಂಡ ಆರೋಪಿಯ ಕಡೆಯವರು, ಬಾಲಕಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಲ್ಲದೇ, ಬಾಲಕಿಯ ತಂದೆ ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾರೆ.

ಘಟನೆಯ ಮಾಹಿತಿ ದೊರೆತು ಸ್ಥಳಕ್ಕೆ ಆಗಮಿಸಿದ ಪೊಲೀಸರು ತಕ್ಷಣ ಕ್ರಮಕೈಗೊಂಡು, ಬಾಲಕಿ ಹಾಗೂ ಆಕೆಯ ತಂದೆ ತಾಯಿಯನ್ನು ರಕ್ಷಿಸಿದ್ದಾರೆ. ಬಳಿಕ ಐವರು ಮಹಿಳೆಯರು ಸೇರಿದಂತೆ ಒಟ್ಟು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಣಬೀರ್ ಕಪೂರ್ ಜೊತೆ ನಟಿಸಲಿದ್ದಾರೆ ರಶ್ಮಿಕಾ ಮಂದಣ್ಣ

ನಟಿ ಮಲೈಕಾ ಅರೋರಾ ಕಾರು ಅಪಘಾತ; ತಲೆಗೆ ತೀವ್ರವಾದ ಏಟು

ಸಸ್ಯಾಹಾರಿಗಳಿಗೇಕೆ ಹಲಾಲ್, ಜಟ್ಕಾ ಕಟ್ ಉಸಾಬರಿ?

ಮಹಿಳೆಯ ಮೇಲೆ ಹಲ್ಲೆ: ಸಾಮಾಜಿಕ ಕಾರ್ಯಕರ್ತ ಸಹಿತ ಮೂವರ ಬಂಧನ

ಮೊಸಳೆಯ ಬಾಯಿಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡ ಯುವಕ!

ಇತ್ತೀಚಿನ ಸುದ್ದಿ