ಮಕ್ಕಳ ಎದುರೇ ಮಹಿಳೆಯರ ಮೇಲೆ ಅತ್ಯಾಚಾರ: ರಷ್ಯಾ ವಿರುದ್ಧ ಕ್ರಮಕೈಗೊಳ್ಳಿ, ಇಲ್ಲವೇ ವಿಶ್ವಸಂಸ್ಥೆ ಬಂದ್ ಮಾಡಿ | ಝಲೆನ್ ಸ್ಕಿ - Mahanayaka
10:06 AM Tuesday 14 - October 2025

ಮಕ್ಕಳ ಎದುರೇ ಮಹಿಳೆಯರ ಮೇಲೆ ಅತ್ಯಾಚಾರ: ರಷ್ಯಾ ವಿರುದ್ಧ ಕ್ರಮಕೈಗೊಳ್ಳಿ, ಇಲ್ಲವೇ ವಿಶ್ವಸಂಸ್ಥೆ ಬಂದ್ ಮಾಡಿ | ಝಲೆನ್ ಸ್ಕಿ

zelensky
06/04/2022

ಕೀವ್: ಉಕ್ರೇನ್ ಮೇಲೆ ದಾಳಿ ನಡೆಸುತ್ತಿರುವ ರಷ್ಯಾ ವಿರುದ್ಧ ಕೂಡಲೇ ಕ್ರಮಕೈಗೊಳ್ಳಿ ಅಥವಾ ವಿಶ್ವಸಂಸ್ಥೆಯನ್ನು ಮುಚ್ಚಿಬಿಡಿ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್ ಸ್ಕಿ(Volodymyr Zelensky) ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಸವಾಲು ಹಾಕಿದ್ದಾರೆ.


Provided by

15 ಸದಸ್ಯರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಕ್ಕಳು, ಮಹಿಳೆಯರನ್ನು ರಷ್ಯಾದ ಸೈನಿಕರು ಕ್ರೂರವಾಗಿ ಕೊಂದು ಹಾಕಿರುವ ವಿಡಿಯೋ ಬಿಡುಗಡೆ ಮಾಡಿದರು.

ಬುಕಾದಲ್ಲಿ ರಷ್ಯಾ ಸೇನೆ ನಡೆಸಿದ ನರಮೇಧವನ್ನು(Russian Attacks) ಇಸ್ಲಾಮಿಕ್ ಸ್ಟೇಟ್ ಗುಂಪಿನಂತಹ ಭಯೋತ್ಪಾದಕ ಕೃತ್ಯಕ್ಕೆ ಹೋಲಿಸಿದರು. ಮಹಿಳೆಯರ ಮೇಲೆ ಅವರ ಮಕ್ಕಳ ಮುಂದೆಯೇ ಅತ್ಯಾಚಾರ ಮಾಡಿ ಭೀಕರವಾಗಿ ಕೊಲ್ಲಲಾಗಿದೆ ಎಂದು ಝಲೆನ್ ಸ್ಕಿ ರಷ್ಯಾದ ಕ್ರೂರತೆಯನ್ನು ಬಯಲು ಮಾಡಿದ್ದಾರೆ.

ವಿಶ್ವಸಂಸ್ಥೆಯು ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯನ್ನು ಖಚಿತಪಡಿಸುವ ಗುರಿಯನ್ನು ಹೊಂದಿದೆ. ಆದರೆ ರಷ್ಯಾದ ಆಕ್ರಮಣವನ್ನು ತಡೆಯಲು ಸಾಧ್ಯವಾಗಿಲ್ಲ. ರಷ್ಯಾ ವಿರುದ್ಧ ಕ್ರಮಕ್ಕೆ ಯಾವುದೇ ಪರ್ಯಾಯ ಆಯ್ಕೆ ಇಲ್ಲದಿದ್ದರೆ ನಿಮ್ಮ ಸಂಸ್ಥೆಯನ್ನು ಮುಚ್ಚಿ ಬಿಡಿ ಎಂದು ಝಲೆನ್ ಸ್ಕಿ ಆಕ್ರೋಶ ಹೊರ ಹಾಕಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾಷ್ಟ್ರವಾಗಿರುವ ರಷ್ಯಾವೇ ಭಯೋತ್ಪಾದಕರಿಗಿಂತಲೂ ಹೀನವಾಗಿರುವ ಹಿಂಸೆಯಲ್ಲಿ ತೊಡಗಿದೆ. ಒಂದೋ ರಷ್ಯಾ ವಿರುದ್ಧ ಕ್ರಮಕೈಗೊಳ್ಳಿ ಇಲ್ಲವಾದರೆ, ವಿಶ್ವ ಸಂಸ್ಥೆನ್ನು ಮುಚ್ಚಿಬಿಡಿ ಎಂದು ಝಲೆನ್ ಸ್ಕಿ ಸವಾಲು ಹಾಕಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು: ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

ಪದೇ ಪದೇ ನೆಟ್ಟಿಗೆ ತೆಗೆಯುವ ಅಭ್ಯಾಸ ಹೊಂದಿದ್ದೀರಾ?: ಇದು ಎಷ್ಟು ಅಪಾಯಕಾರಿ?

ಮಗಳ ಬೆನ್ನಲ್ಲಿ ಅಡ್ರೆಸ್ ಬರೆದ ಮಹಿಳೆ: ಉಕ್ರೇನ್ ನಲ್ಲೊಂದು ಮನಕಲಕುವ ಘಟನೆ

ಸಣ್ಣ ವಯಸ್ಸಲ್ಲೇ ಪ್ರೀತಿಸಿದರು, ಮದುವೆಯೂ ಆಯ್ತು, ಆದರೆ ಪ್ರಕೃತಿ ಆಟಕ್ಕೆ ದುರಂತವೇ ನಡೆದು ಹೋಯ್ತು!

ಇತ್ತೀಚಿನ ಸುದ್ದಿ