ಎರಡು ತಲೆ ಹಾವು ಮಾರಾಟ ಯತ್ನ ಆರೋಪಿಗಳ ಬಂಧನ - Mahanayaka
10:19 PM Tuesday 14 - October 2025

ಎರಡು ತಲೆ ಹಾವು ಮಾರಾಟ ಯತ್ನ ಆರೋಪಿಗಳ ಬಂಧನ

hasanna
06/04/2022

ಮಡಿಕೇರಿ : ಅಳಿವಿನಂಚಿನಲ್ಲಿರುವ ಎರಡು ತಲೆ (ರೆಡ್ ಸ್ಯಾಂಡ್ ಬೋವ) ಹಾವನ್ನು ಮಾರಾಟ ಮಾಡಲು ಯತ್ನಿಸಿದರ  ಇಬ್ಬರು ಆರೋಪಿಗಳನ್ನು ವಿರಾಜಪೇಟೆ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ್ದಾರೆ.


Provided by

ಆರೋಪಿಗಳನ್ನು ಅರಸೀಕೆರೆ ನಿವಾಸಿ ಪುನೀತ್ ಕುಮಾರ್ ಮತ್ತು ಬೇಲೂರು ಚಂದನ್ ಕುಮಾರ್ ಎಂದು ಗುರುತಿಸಲಾಗಿದೆ.ವಿರಾಜಪೇಟೆ ತಾಲ್ಲೂಕಿನ ಪೆರಂಬಾಡಿ ಬಳಿ ಕರ್ನಾಟಕ-ಕೇರಳ ರಾಜ್ಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಆರೋಪಿಗಳನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಪೊಲೀಸ್ ಅಧೀಕ್ಷಕ ಎನ್.ಟಿ.ಶ್ರೀನಿವಾಸ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ಸಿಐಡಿ ಪೊಲೀಸ್ ಅರಣ್ಯ ಸಂಚಾರಿದಳದ ಉಪನಿರೀಕ್ಷಕ ಸಿ.ಯು.ಸವಿ, ಸಿಬ್ಬಂದಿ ಟಿ.ಪಿ.ಮಂಜುನಾಥ್, ಕೆ.ಎಸ್.ದೇವಯ್ಯ, ಸಿ.ಬಿ.ಬೀನ, ಎಸ್.ಎಂ.ಯೋಗೇಶ್ ಪಿ.ಯು.ಮುನೀರ್, ಆರ್.ನಂದಕುಮಾರ್ ಹಾಗೂ ಮೋಹನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.ಇವರು ಕೃತ್ಯಕ್ಕೆ ಬಳಸಿದ ಬೈಕ್ ನ್ನು ವಶಪಡಿಸಿಕೊಳ್ಳಲಾಗಿದೆ .

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಟ ಮೋಹನ್ ಲಾಲ್ ವಿರುದ್ಧ ದಂತ ಪ್ರಕರಣ: ಸರ್ಕಾರದ ನಿರ್ಧಾರದ ವಿರುದ್ಧದ ಅರ್ಜಿಗಳನ್ನು ತಿರಸ್ಕರಿಸಿದ ಕೋರ್ಟ್

ಬೆಲೆ ಏರಿಕೆ ನಡುವೆ ಎಣ್ಣೆ ಪ್ರಿಯರಿಗೆ ಶಾಕಿಂಗ್ ನ್ಯೂಸ್

ದೃಷ್ಟಿ ಹೀನರಿಗೆ ವಿಶೇಷ ಶೂ ನಿರ್ಮಿಸಿದ ಬಾಲಕ: ಈ ಶೂನ ವಿಶೇಷತೆ ಏನು?

ಕೆಎಸ್ಸಾರ್ಟಿಸಿ ಬಸ್ಸು ಮತ್ತು ಕಾರು ಡಿಕ್ಕಿ ಇಬ್ಬರ ಸಾವು

ಪದೇ ಪದೇ ನೆಟ್ಟಿಗೆ ತೆಗೆಯುವ ಅಭ್ಯಾಸ ಹೊಂದಿದ್ದೀರಾ?: ಇದು ಎಷ್ಟು ಅಪಾಯಕಾರಿ?

 

ಇತ್ತೀಚಿನ ಸುದ್ದಿ