ಮಿತಿ ಮೀರಿದರೆ, ಕಾನೂನು ಕೈಗೆತ್ತಿಕೊಂಡರೆ ಕ್ರಮ: ಹಿಂದೂ ಸಂಘಟನೆಗಳಿಗೆ ಮಾಧುಸ್ವಾಮಿ ಎಚ್ಚರಿಕೆ - Mahanayaka

ಮಿತಿ ಮೀರಿದರೆ, ಕಾನೂನು ಕೈಗೆತ್ತಿಕೊಂಡರೆ ಕ್ರಮ: ಹಿಂದೂ ಸಂಘಟನೆಗಳಿಗೆ ಮಾಧುಸ್ವಾಮಿ ಎಚ್ಚರಿಕೆ

madhuswamy
11/04/2022


Provided by

ವಿಜಯನಗರ:  ಮುಸ್ಲಿಮ್  ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸುವ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಧಾರವಾಡದಲ್ಲಿ ಮುಸ್ಲಿಮರ ಅಂಗಡಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸುವವರು ಅಥವಾ ಗಲಾಟೆ ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸುತ್ತೇವೆ. ದೇಶದಲ್ಲಿ ವ್ಯಾಪಾರ ಮಾಡಲು ಸಂವಿಧಾನಾತ್ಮಕವಾಗಿ ಎಲ್ಲರಿಗೂ ಹಕ್ಕಿದೆ. ಕಾನೂನು ಉಲ್ಲಂಘಿಸುವವರನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಹಿಂದೂಪರ ಸಂಘಟನೆಗಳವರು ಏಕೆ ಹೀಗೆ ಮಾಡುತ್ತಿದ್ದಾರೆ? ಮಿತಿ ಮೀರಿದರೆ, ಕಾನೂನು ಕೈಗೆತ್ತಿಕೊಂಡರೆ, ಸರ್ಕಾರ ಕ್ರಮ ವಹಿಸಿಯೇ ತೀರುತ್ತದೆ. ಇದರಲ್ಲಿ ಎರಡು ಮಾತಿಲ್ಲ ಎಂದು ಮಾಧುಸ್ವಾಮಿ ಇದೇ ವೇಳೆ ಎಚ್ಚರಿಕೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೋಳಿ ಮಾರಾಟದ ಅಂಗಡಿ ಮುಂದೆ ಗಲಾಟೆ: ಇಬ್ಬರು ರೌಡಿಶೀಟರ್ ಗಳ ಬಂಧನ

ಜೋಗ ಜಲಪಾತದ ಬಳಿ ರೋಪ್ ವೇ ನಿರ್ಮಾಣಕ್ಕೆ ಅನುಮೋದನೆ

ಯಾರಾಗಲಿದ್ದಾರೆ ಪಾಕಿಸ್ತಾನದ ನೂತನ ಪ್ರಧಾನಿ?

ಮೊಬೈಲ್ ಗೇಮ್ ಆಡಿ ಮಾನಸಿಕ ರೋಗಿಯಾದ ವಿದ್ಯಾರ್ಥಿ: ಪ್ರಜ್ಞೆ ತಪ್ಪಿದರೂ ನಿಲ್ಲದ ಗೇಮ್

ಮುಸ್ಲಿಮ್ ವ್ಯಾಪಾರಿಯ ಮೇಲೆ ದಾಳಿ ಪ್ರಕರಣ: ಓರ್ವ ಕಿಡಿಗೇಡಿಯ ಬಂಧನ

ಇತ್ತೀಚಿನ ಸುದ್ದಿ