ಕೊನೆಗೂ ರಾಜೀನಾಮೆ ಘೋಷಿಸಿದ ಸಚಿವ ಕೆ.ಎಸ್.ಈಶ್ವರಪ್ಪ - Mahanayaka
10:15 AM Wednesday 15 - October 2025

ಕೊನೆಗೂ ರಾಜೀನಾಮೆ ಘೋಷಿಸಿದ ಸಚಿವ ಕೆ.ಎಸ್.ಈಶ್ವರಪ್ಪ

eshwarappa
14/04/2022

ಬೆಂಗಳೂರು:  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕೊನೆಗೂ ತಮ್ಮ ರಾಜೀನಾಮೆಯನ್ನು ಘೋಷಿಸಿದ್ದಾರೆ.


Provided by

ಶಿವಮೊಗ್ಗದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಭಾರತೀಯ ಜನತಾ ಪಾರ್ಟಿಯ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವನಾಗಿ ನಾನು ಈವರೆಗೆ  ಕೆಲಸ ಮಾಡಿದ್ದೇನೆ.  ಇವತ್ತು ನಾನು ತೀರ್ಮಾನ ತೆಗೆದುಕೊಂಡಿದ್ದೇನೆ.  ನಾಳೆ ದಿನ ಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಈಶ್ವರಪ್ಪ ತಿಳಿಸಿದರು.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪನವರು ರಾಜೀನಾಮೆ ನೀಡಬೇಕು ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು, ವಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ್ದವು. ಈ ನಡುವೆ ತಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದರು. ಇದೀಗ ಕೊನೆಗೂ ಅವರು ರಾಜೀನಾಮೆ ಘೋಷಿಸಿದ್ದಾರೆ. ನಾಳೆ ತಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರೂ ನನ್ನನ್ನು ದೇವಸ್ಥಾನದೊಳಗೆ ಬಿಡಲ್ಲ: ಡಾ.ಜಿ.ಪರಮೇಶ್ವರ್

ಮಸಾಜ್ ಪಾರ್ಲರ್‌ ನಲ್ಲಿ ಲೈಂಗಿಕ ದಂಧೆ: ಕಿರುಕುಳಕ್ಕೊಳಗಾದ ಯುವತಿಯ ರಕ್ಷಣೆ

ರಷ್ಯಾದ ಬೃಹತ್ ಯುದ್ಧನೌಕೆಯನ್ನು ಸ್ಫೋಟಿಸಿದ ಉಕ್ರೇನ್

ರಷ್ಯಾ ಸೈನಿಕರ ಅತ್ಯಾಚಾರದ ಪರಿಣಾಮ ಗರ್ಭಿಣಿಯರಾದ 9 ಮಂದಿ ಉಕ್ರೇನ್ ಮಹಿಳೆಯರು

ಹುಟ್ಟೂರಿಗೆ ತಲುಪಿದ ಹಿಂದೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಪಾರ್ಥಿವ ಶರೀರ

ಇತ್ತೀಚಿನ ಸುದ್ದಿ