ಈಶ್ವರಪ್ಪ ಶೀಘ್ರವೇ ಆರೋಪಗಳಿಂದ ಮುಕ್ತರಾಗುತ್ತಾರೆ: ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ - Mahanayaka
6:55 AM Wednesday 15 - October 2025

ಈಶ್ವರಪ್ಪ ಶೀಘ್ರವೇ ಆರೋಪಗಳಿಂದ ಮುಕ್ತರಾಗುತ್ತಾರೆ: ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ

eshwarappa bommai
15/04/2022

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಯಾರ ಒತ್ತಡವೂ ಇಲ್ಲ  ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.


Provided by

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ನಾಯಕರು ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಗ್ಗೆ ಕೇಳಿದಾಗ, ಕಾಂಗ್ರೆಸ್ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ ಜೆ ಜಾರ್ಜ್ ರಾಜೀನಾಮೆ ನೀಡಿದ ನಂತರ ಅವರ ಬಂಧನವಾಗಿತ್ತೇ? ಎಂದು ಪ್ರಶ್ನಿಸಿದರು.

ಇಂದು ಸಂಜೆ ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ, ಈಶ್ವರಪ್ಪ ತಮ್ಮದೇ ನಿರ್ಧಾರದಿಂದ ರಾಜೀನಾಮೆ ನೀಡುತ್ತಿದ್ದಾರೆ, ನಿನ್ನೆ ರಾತ್ರಿ ದೂರವಾಣಿ ಮೂಲಕ ಅವರಲ್ಲಿ ಮಾತನಾಡಿದ್ದೇನೆ, ಎಲ್ಲಾ ಆಯಾಮಗಳಿಂದ ಪ್ರಕರಣದ ತನಿಖೆ ಶೀಘ್ರವೇ ಮಾಡಿ ಎಂದು ಹೇಳಿದ್ದಾರೆ, ಆದಷ್ಟು ಬೇಗ ಅವರು ಆರೋಪಗಳಿಂದ ಮುಕ್ತರಾಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೊನೆಗೂ ರಾಜೀನಾಮೆ ಘೋಷಿಸಿದ ಸಚಿವ ಕೆ.ಎಸ್.ಈಶ್ವರಪ್ಪ

ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರೂ ನನ್ನನ್ನು ದೇವಸ್ಥಾನದೊಳಗೆ ಬಿಡಲ್ಲ: ಡಾ.ಜಿ.ಪರಮೇಶ್ವರ್

ಮಸಾಜ್ ಪಾರ್ಲರ್‌ ನಲ್ಲಿ ಲೈಂಗಿಕ ದಂಧೆ: ಕಿರುಕುಳಕ್ಕೊಳಗಾದ ಯುವತಿಯ ರಕ್ಷಣೆ

ರಷ್ಯಾದ ಬೃಹತ್ ಯುದ್ಧನೌಕೆಯನ್ನು ಸ್ಫೋಟಿಸಿದ ಉಕ್ರೇನ್

ರಷ್ಯಾ ಸೈನಿಕರ ಅತ್ಯಾಚಾರದ ಪರಿಣಾಮ ಗರ್ಭಿಣಿಯರಾದ 9 ಮಂದಿ ಉಕ್ರೇನ್ ಮಹಿಳೆಯರು

 

ಇತ್ತೀಚಿನ ಸುದ್ದಿ