ಆ್ಯಸಿಡ್ ನಾಗೇಶ್ ನ ಮೇಲೆ ಗುಂಡು ಹಾರಿಸಿದ ಪೊಲೀಸರು! - Mahanayaka
12:10 AM Wednesday 15 - October 2025

ಆ್ಯಸಿಡ್ ನಾಗೇಶ್ ನ ಮೇಲೆ ಗುಂಡು ಹಾರಿಸಿದ ಪೊಲೀಸರು!

nagesh
14/05/2022

ತಮಿಳುನಾಡಿನಲ್ಲಿ ಬಂಧಿಸಲಾಗಿದ್ದ ಕಿರಾತಕ ಆ್ಯಸಿಡ್ ನಾಗೇಶ್ ನ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ, ಪೊಲೀಸರು ಆರೋಪಿಗೆ ಗುಂಡು ಹೊಡೆದಿದ್ದಾರೆ.


Provided by

ತಮಿಳುನಾಡಿನಲ್ಲಿ ಆರೋಪಿಯನ್ನು ಬಂಧಿಸಿ ಬೆಂಗಳೂರಿಗೆ ಕರೆ ತರುತ್ತಿದ್ದ ವೇಳೆ ನಾಗೇಶ್ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಕೆಂಗೇರಿ ಮೇಲ್ಸೇತುವೆ ಬಳಿ ಮೂತ್ರ ವಿಸರ್ಜನೆಯ ನೆಪ ಹೇಳಿದ ನಾಗೇಶ್, ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ, ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಗುಂಡೇಟಿನಿಂದ ನಾಗೇಶ್ ನ ಬಲಗಾಲಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಳೆದ 16 ದಿನಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ನಾಗೇಶ್, ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಾಗೇಶ್‌ ಯುವತಿ ಮೇಲೆ ಆ್ಯಸಿಡ್‌ ದಾಳಿ ಮಾಡುವಾಗ ಆತನ ಬಲಗೈ ಮೇಲೂ ಆ್ಯಸಿಡ್‌ ಬಿದ್ದು ಗಾಯವಾಗಿತ್ತು. ಆರೋಪಿಯು ರಮಣ ಆಶ್ರಮದಲ್ಲಿ ಸ್ವಾಮೀಜಿ ಸೋಗಿನಲ್ಲಿ ಧ್ಯಾನ, ಜಪ-ತಪ ಮಾಡುವಾಗ ಹೆಗಲ ಮೇಲೆ ಖಾವಿ ಬಟ್ಟೆ ಹಾಕಿಕೊಳ್ಳುತ್ತಿದ್ದ. ಈ ವೇಳೆ ಆತನ ಕೈ ಮೇಲಿನ ಗಾಯ ಕಾಣುತಿತ್ತು. ಇದನ್ನು ಗಮನಿಸಿದ್ದ ಸ್ಥಳೀಯ ಭಕ್ತರು, ಕರಪತ್ರದಲ್ಲಿದ್ದ ಭಾವಚಿತ್ರವನ್ನು ನೋಡಿ ಅನುಮಾನಗೊಂಡಿದ್ದರು. ಕರಪತ್ರದಲ್ಲಿದ್ದ ಪೊಲೀಸರ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿ ಆರೋಪಿಯ ಬಗ್ಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆಸಿಡ್ ಯಾಕೆ ಹಾಕಿದ್ದು ಎಂಬ ಪ್ರಶ್ನೆಗೆ ನಾಗೇಶನ ಉತ್ತರ ಏನು ಗೊತ್ತಾ?

ಸ್ವಾಮೀಜಿ ವೇಷದಲ್ಲಿ ಸಿಕ್ಕಿ ಬಿದ್ದ ಆ್ಯಸಿಡ್ ದಾಳಿ ಆರೋಪಿ ನಾಗೇಶ್!

ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತರು ನೋವು ಹೇಗೆ ಸಹಿಸುತ್ತಾರೆ?: ಭಾವುಕ ನುಡಿಗಳನ್ನಾಡಿದ ಸಿಎಂ ಬೊಮ್ಮಾಯಿ

ತಂದೆ ಕರೆನ್ಸಿ ಹಾಕಲಿಲ್ಲ ಎಂದು ಖಾಸಗಿ ಭಾಗಕ್ಕೆ ತ್ರಿಶೂಲದಿಂದ ಚುಚ್ಚಿಕೊಂಡ ಯುವಕ!

ಇತ್ತೀಚಿನ ಸುದ್ದಿ