ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ನಿವಾಸಗಳ ಮೇಲೆ ಸಿಬಿಐ ದಾಳಿ - Mahanayaka

ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ನಿವಾಸಗಳ ಮೇಲೆ ಸಿಬಿಐ ದಾಳಿ

p chidambaram
17/05/2022

ನವದೆಹಲಿ:ಬೃಹತ್ ಬೆಳವಣಿಗೆಯೊಂದರಲ್ಲಿ ಇಂದು ಬೆಳ್ಳಂಬೆಳಿಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂಗೆ ಸಿಬಿಐ ಆಘಾತ ನೀಡಿದೆ.


Provided by

ಚಿದಂಬರಂ ಅವರ ಮಗ ಹಾಗೂ ಸಂಸದ ಕಾರ್ತಿ ಚಿದಂಬರಂ ವಿರುದ್ಧ ದಾಖಲಾಗಿರುವ ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಂಬಂಧಿಸಿದ ನಿವೇಶನಗಳ ಮೇಲೆ ಸಿಬಿಐ ದಾಳಿ ನಡೆಸಿದೆ.

ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಪ್ರಕರಣವೊಂದರ ಸಂಬಂಧ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. 2010-14ರ ಅವಧಿಯಲ್ಲಿ ಕಾರ್ತಿ ಚಿದಂಬರಂ ಭಾಗಿಯಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಹೊಸದಾಗಿ ಪ್ರಕರಣ ದಾಖಲಿಸಿಕೊಂಡಿದೆ.

ಕಾರ್ತಿ ಚಿದಂಬರಂ ತಂದೆ ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಮಯದಲ್ಲಿ 305 ಕೋಟಿ ರೂ. ಮೊತ್ತದ ವಿದೇಶಿ ಹಣವನ್ನು ಸ್ವೀಕರಿಸುವುದಕ್ಕಾಗಿ ಐಎನ್ ಎಕ್ಸ್ ಮೀಡಿಯಾಗೆ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (ಎಫ್‌ಐಪಿಬಿ) ಅನುಮತಿ ನೀಡಿದ ಪ್ರಕರಣವು ಸೇರಿದೆ. ಇದೇ ಪ್ರಕರಣದಲ್ಲಿ ಹಿಂದೊಮ್ಮೆ ಕಾರ್ತಿ ಚಿದಂಬರಂ ಬಂಧನವಾಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇನ್ನು ಮುಂದೆ ಬೆಳಗ್ಗೆ 6 ಗಂಟೆಗೆ ಆಜಾನ್ ಕೂಗಲು ನಿರ್ಧಾರ!

ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರ

ಕ್ವಾರಿ ದುರಂತ: ಬಂಡೆ ಉರುಳಿ ಬಿದ್ದು 3 ಮಂದಿ ಸಾವು, ಹಿಟಾಚಿಯೊಳಗೆ ಸಿಲುಕಿರುವ ಚಾಲಕ

ಫೇಸ್ ಬುಕ್ ಲೈವ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರಕ್ಷಿಸಿದ ಪೊಲೀಸರು

ಇತ್ತೀಚಿನ ಸುದ್ದಿ