ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ವೇಳೆ ಅಪಘಾತ: ಇಬ್ಬರು ಸಾವು, ಓರ್ವ ಗಂಭೀರ - Mahanayaka
10:05 PM Tuesday 9 - September 2025

ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ವೇಳೆ ಅಪಘಾತ: ಇಬ್ಬರು ಸಾವು, ಓರ್ವ ಗಂಭೀರ

mysore
20/05/2022

ಮೈಸೂರು: ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿ ಕೊಳ್ಳಲು ಹೋಗಿ ರಸ್ತೆ ಅಪಘಾತವಾಗಿದ್ದು, ಅಪಘಾತದ ತೀವ್ರತೆಗೆ ಇಬ್ಬರು ಯುವಕರು‌ ಸ್ಥಳದಲ್ಲಿ ಸಾವನಪ್ಪಿದ್ದು, ಓರ್ವ ಯುವಕನ ಸ್ಥಿತಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರಿನ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Provided by

ಕೂಡ್ಲಾಪುರದ ಸಚಿನ್, ಉತ್ತನಹಳ್ಳಿಯ ದೊರೆಸ್ವಾಮಿ ಅಪಘಾತದಲ್ಲಿ ಮೃತಪಟ್ಟವರು. ನಂಜನಗೂಡಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮಕ್ಕೆ ತೆರಳುವಾಗ ಈ ಘಟನೆ ನಡೆದಿದೆ

ತ್ರಿಬಲ್ ರೈಡಿಂಗ್ ನಲ್ಲಿ ಯುವಕರು ಹೋಗುತ್ತಿದ್ದ ವೇಳೆ ,ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನು ಕಂಡು ಹಿಂದಕ್ಕೆ ಹೋಗಲು ಯತ್ನಿಸಿದ್ದು, ಯು ಟರ್ನ್ ಮಾಡುವ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್  ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರೇಯಸಿಯನ್ನು ಗೋವಾ ಬೀಚ್ ಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಯುವಕ!

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಮಗುವಿಗೆ ಜನ್ಮ ನೀಡಿದ ಬಾಲಕಿ

ಜೂನ್ 1ರಿಂದ ಜುಲೈ 31ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಮುಂದಕ್ಕೆ ಚಲಿಸಿ ಎಂದ ಗೂಗಲ್ ಮ್ಯಾಪ್: ಹೊಳೆಗೆ ಕಾರು ಇಳಿಸಿದ ಚಾಲಕ

ವಿಶ್ವಕ್ಕೆ ಆತಂಕ ಸೃಷ್ಟಿಸಿದ ಮಂಕಿ ಪಾಕ್ಸ್: ಮೂರು ದೇಶಗಳಲ್ಲಿ ರೋಗ ಪತ್ತೆ | ಇದರ ಲಕ್ಷಣಗಳೇನು?

 

 

ಇತ್ತೀಚಿನ ಸುದ್ದಿ