ಮುಂದಿನ 45 ದಿನಗಳು ಬಹಳ ಕಷ್ಟಕರವಾಗಲಿದೆಯೇ? | ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ? - Mahanayaka
8:29 AM Wednesday 20 - August 2025

ಮುಂದಿನ 45 ದಿನಗಳು ಬಹಳ ಕಷ್ಟಕರವಾಗಲಿದೆಯೇ? | ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ?

04/12/2020


Provided by

ಬೆಂಗಳೂರು:  ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಕರ್ಫ್ಯೂ ಜಾರಿಯಾಗುತ್ತದೆಯೇ ಎಂಬ ಬಗ್ಗೆ ಆರೋಗ್ಯ ಸಚಿವ  ಡಾ.ಸುಧಾಕರ್ ಅವರು ಸ್ಪಷ್ಟನೆ ನೀಡಿದ್ದು, ಕೆಲವು ನಿಯಮಗಳನ್ನು ನಾವು ಕಠಿಣಗೊಳಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.


ವಿಧಾನಸೌಧದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕೊರೊನಾ ಹಿನ್ನೆಲೆಯಲ್ಲಿ ನಾವು ರಾತ್ರಿ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಯಾವುದೇ ಚರ್ಚೆಗಳನ್ನು ನಡೆಸಿಲ್ಲ.  ತಾಂತ್ರಿಕ ಸಲಹಾ ಸಮಿತಿ ಕೂಡ ಈ ಬಗ್ಗೆ ಯಾವುದೇ ಸಲಹೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಜನವರಿ, ಫೆಬ್ರವರಿಯಲ್ಲಿ ರಾಜ್ಯದಲ್ಲಿ ಎರಡನೇ ಬಾರಿಗೆ ಕೊರೊನಾ ಅಲೆ ಬರುವ ಸಾಧ್ಯತೆಗಳಿವೆ. ಮುಂದಿನ 45 ದಿನಗಳು ಬಹಳ ಮಹತ್ವದ್ದಾಗಿದೆ. ಲಾಕ್ ಡೌನ್ ನಲ್ಲಿ ತೆಗೆದುಕೊಂಡ ಕ್ರಮಗಳನ್ನು ಮತ್ತೆ ತೆಗೆದುಕೊಳ್ಳುವ ಅನಿವಾರ್ಯತೆ ಇದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ