ಸಚಿವ ನಾಗೇಶ್ ಮನೆಗೆ ಮುತ್ತಿಗೆ ಹಾಕಿ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿ ಆಕ್ರೋಶ - Mahanayaka
4:33 AM Wednesday 15 - October 2025

ಸಚಿವ ನಾಗೇಶ್ ಮನೆಗೆ ಮುತ್ತಿಗೆ ಹಾಕಿ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿ ಆಕ್ರೋಶ

b c nagesh
02/06/2022

ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಹಿನ್ನೆಲೆ ಅಖಿಲ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‌ ಎಸ್‌ ಯುಐ) ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ಕಾರ್ಯಕರ್ತರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮನೆಗೆ ದಿಢೀರ್‌ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಲ್ಲದೆ, ಖಾಕಿ ಚಡ್ಡಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ.


Provided by

ಈಗಾಗಲೇ 15 ಜನರು ಮತ್ತು 2 ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ರೀತಿಯ ಗುಂಡಾವರ್ತನೆ ನಮ್ಮಲ್ಲಿ ನಡೆಯಲ್ಲ. ಬೆಂಗಳೂರಿಂದ ಐವರು, ದಾವಣಗೆರೆಯಿಂದ ಮೂವರು, ಹಾಸನದಿಂದ ಒಬ್ಬರು, ತುಮಕೂರಿನಿಂದ ಒಬ್ಬರು‌ ಎಸ್ ​ಎಸ್​ ಯುಐ ಮುಖಂಡರು ಪ್ರೀ ಪ್ಲಾನ್ ಮಾಡಿಕೊಂಡು ಬಂದಿದ್ದಾರೆ. ಅವರಿಗೆಲ್ಲ ಈಗ ಪೊಲೀಸರು ಕಾನೂನಿನ ಪಾಠ ಮಾಡ್ತಾರೆ. ಇದು ಕಾಂಗ್ರೆಸ್ ಮುಖಂಡರ ಕೈವಾಡ. ದಾವಣಗೆರೆಯ ಎನ್​​ ಎಸ್ ​ಯುಐ ಉಪಾಧ್ಯಕ್ಷ ಫೈಲ್ವಾನ್ ಅಲಿ ರೆಹಮಾನ್ ಎಂಬಾತ ಬಂದಿದ್ದಾನೆ. ಮೊದಲೇ ಸಂಚು ರೂಪಿಸಿಕೊಂಡು ಬಂದಿದ್ದಾರೆ ಎಂದು ಗೃಹ ಸಚಿವರು ಎಚ್ಚರಿಸಿದರು.

ಘಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ಹಲವು ಮುಖಂಡರು ಖಂಡಿಸಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಈ ಕುರಿತು ತುರ್ತುಗೋಷ್ಠಿ ನಡೆಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಕಾಂಗ್ರೆಸ್ ​ನ ಕೆಲ ಕಾರ್ಯಕರ್ತರು ನಾಗೇಶ್​ ರ ಮನೆಗೆ ನುಗ್ಗಿದ್ದಾರೆ. ಅಷ್ಟೇ ಅಲ್ಲ ನನಗೆ ಬಂದ ಮಾಹಿತಿ ಪ್ರಕಾರ ಅವರು ನಾಗೇಶ್​ರ ಮನೆಗೆ ಬೆಂಕಿ ಹಾಕಲು ಮುಂದಾಗಿದ್ದರು ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೋಮುವಾದದ ಪ್ರಯೋಗಶಾಲೆಯಾಗಿ ಕರ್ನಾಟಕ: ಮುಸ್ಲಿಂ ಸಮಾವೇಶದಲ್ಲಿ ಕೇಳಿ ಬಂದ ಅಭಿಪ್ರಾಯಗಳೇನು?

ಲಾರಿಯಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳ ಸಾಗಾಟ:  ಇಬ್ಬರು ಪೊಲೀಸ್ ವಶಕ್ಕೆ

3 ವರ್ಷದ ಬಾಲಕಿ ಮೇಲೆ 12 ವರ್ಷದ ಬಾಲಕನಿಂದ ಅತ್ಯಾಚಾರ: ಬಾಲಕನ ಕೃತ್ಯ ಸಮರ್ಥಿಸಿದ ತಂದೆ

ಶಿಕ್ಷಕಿಯನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಹನುಮ ಜನ್ಮ ಸ್ಥಳ ವಿವಾದ: ಧರ್ಮ ಸಂಸತ್ ನಲ್ಲಿ ಸ್ವಾಮೀಜಿಗಳ ಕಿರಿಕ್:  ಮೈಕ್ ನಿಂದ ಹೊಡೆಯಲು ಹೋದ ಸ್ವಾಮೀಜಿ!

ಇತ್ತೀಚಿನ ಸುದ್ದಿ