ದಕ್ಷಿಣ ಕನ್ನಡದ ಸುಳ್ಯದಲ್ಲಿ ಯುವಕನ ಮೇಲೆ ಗುಂಡಿನ ದಾಳಿ - Mahanayaka
12:27 PM Wednesday 3 - September 2025

ದಕ್ಷಿಣ ಕನ್ನಡದ ಸುಳ್ಯದಲ್ಲಿ ಯುವಕನ ಮೇಲೆ ಗುಂಡಿನ ದಾಳಿ

car
06/06/2022


Provided by

ಸುಳ್ಯ: ಸ್ಕಾರ್ಪಿಯೋ ಕಾರಿನಲ್ಲಿ ಬಂದ ನಾಲ್ಕು ಜನ ಅಪರಿಚಿತರ ತಂಡವು ಯುವಕನೋರ್ವನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಭಾನುವಾರ ತಡರಾತ್ರಿ ಸುಳ್ಯ ತಾಲೂಕಿನ ಮೊಗರ್ಪಣೆಯಲ್ಲಿ ಈ ಘಟನೆ ನಡೆದಿದೆ.

ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸುಳ್ಯ ನಗರದ ಜ್ಯೋತಿ ಸರ್ಕಲ್‌ ಹತ್ತಿರ ಘಟನೆ ನಡೆದಿದ್ದು ಸುಳ್ಯ ಜಯನಗರದ ಮಹಮ್ಮದ್‌ ಸಾಯಿ(39) ಎಂಬವರ ಮೇಲೆ ಸ್ಕಾರ್ಪಿಯೋದಲ್ಲಿ ಬಂದ ಅಪರಿಚಿತರು ದಾಳಿ ಮಾಡಿದ್ದಾರೆ.

ಗುಂಡಿನ ದಾಳಿಯಿಂದ ಯುವಕ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದು, ಕಾರಿಗೆ ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

ತಂಗಿಯ ಮನೆಗೆ ತೆರಳಿ ವಾಪಸ್ ಆಗಿ ತಮ್ಮ ಕಾರು ಹತ್ತುತ್ತಿದ್ದ ವೇಳೆ ದಾಳಿ ನಡೆಸಲಾಗಿದ್ದು, ವೇಳೆ ಗುಂಡಿನ ಚಿಲ್ಲ್ ತಾಗಿ ಸಾಯಿಯ ಹೊಟ್ಟೆ ಭಾಗಕ್ಕೆ ಸಣ್ಣ ಗಾಯವಾಗಿದೆ. ಜ್ಯೋತಿ ಸರ್ಕಲ್‌ ಕಡೆಯಿಂದ ಬಂದ ಸ್ಕಾರ್ಪಿಯೋ ಕಾರಿನಲ್ಲಿದ್ದ ನಾಲ್ಕು ಜನ ಅಪರಿಚಿತರು ಇವರ ಕಡೆಗೆ ಗುಂಡು ಹಾರಿಸಿದ್ದು, ಈ ವೇಳೆ ಕಾರಿನ ಬಲ ಬದಿಯ ಎರಡು ಡೋರ್‌ ಗಳ ಮಧ್ಯಕ್ಕೆ ಗುಂಡು ತಾಗಿದ ಗುರುತು ಕಂಡು ಬಂದಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೊರಿಯನ್ ವಿಡಿಯೋ ನೋಡುವ ಚಟದಿಂದ ಹೊರಬರಲಾಗದೇ ಆತ್ಮಹತ್ಯೆಗೆ ಶರಣಾದ ಬಾಲಕಿ!

ದೇಶದ್ರೋಹಿ ಕೃತ್ಯ: ಪಂಚಾಯತ್ ರಸ್ತೆಗೆ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಹೆಸರು!

ರೈಲಿನಲ್ಲಿ ನಿದ್ದೆ ಮಾಡುವವರಿಗೆ ಸಿಹಿ ಸುದ್ದಿ!

ಪತಿಯನ್ನು ಕಟ್ಟಿ ಹಾಕಿ ಪತ್ನಿಯ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ!: ಅಮಾನವೀಯ ಘಟನೆ

ಇತ್ತೀಚಿನ ಸುದ್ದಿ