ಒಂದೇ ಮಳೆಗೆ ಕಿತ್ತು ಹೋದ ಪ್ರಧಾನಿಯನ್ನು ಸ್ವಾಗತಿಸಿದ್ದ ಹೊಸ ರಸ್ತೆಗಳು! - Mahanayaka

ಒಂದೇ ಮಳೆಗೆ ಕಿತ್ತು ಹೋದ ಪ್ರಧಾನಿಯನ್ನು ಸ್ವಾಗತಿಸಿದ್ದ ಹೊಸ ರಸ್ತೆಗಳು!

bangalore road
23/06/2022

ಬೆಂಗಳೂರು: ಪ್ರಧಾನಿ  ಬೆಂಗಳೂರಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ 23 ಕೋಟಿ ವೆಚ್ಚದಲ್ಲಿ  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ನಗರದ ರಸ್ತೆಗಳ ಗುಂಡಿಗಳನ್ನು ಮುಚ್ಚಲಾಗಿದ್ದು, ಆದರೆ ಕಳೆದ ಒಂದು ದಿನ ಸುರಿದ ಮಳೆಗೆ ರಸ್ತೆಯ ಹಲವೆಡೆ ದೊಡ್ಡ ಹೊಂಡಗಳು ಕಾಣಿಸಿಕೊಂಡಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಡಿಸಿದ್ದಾರೆ.

ಹೊಸ ರಸ್ತೆಯ ಚಿತ್ರಗಳನ್ನು ತೆಗೆದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿರುವುದರಿಂದ ಈ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ

ಆದರೆ ಬೆಂಗಳೂರಿನ ಚಿತ್ರಣ ಬದಲಿಸಲು ಮೂಲಸೌಕರ್ಯ ಅಭಿವೃದ್ಧಿ ನಿಧಿಯ ನೆರವಿನಿಂದ ರಸ್ತೆ ನಿರ್ಮಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿವರಿಸುತ್ತಿದೆ. ಮತ್ತು  ಪ್ರಧಾನಿ ಭೇಟಿಯಿಂದ ರಸ್ತೆ ನಿರ್ಮಾಣಕ್ಕೆ ವೇಗ ಸಿಕ್ಕಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಆವರಣದ ಬಳಿ 3.6 ಕಿ.ಮೀ ಉದ್ದದ ಹೊಸ ರಸ್ತೆ ನಿರ್ಮಾಣ ಮಾಡಿದರು.ಆದರೆ ಒಂದೇ ಮಳೆಗೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ ರಸ್ತೆಯಲ್ಲಿ ಹೊಂಡಗಳು ಬಿದ್ದಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.

ಹೊಂಡಗಳ ಬಳಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಪ್ರಯಾಣಿಕರು ಹೊಂಡಗಳಿಗೆ ಬೀಳದಂತೆ ತಡೆಯಲಾಗಿದೆ.  ಸೋಮವಾರ ಈ ರಸ್ತೆಯಲ್ಲಿರುವ ಡಾ.ಭೀಮರಾವ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್‌ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ತಾಯಿ, ಇಬ್ಬರು ಮಕ್ಕಳ ಕೊಲೆ ‌ಪ್ರಕರಣ:  ಆರೋಪಿ ಪ್ರವೀಣ್ ಭಟ್ ನಿರ್ದೋಷಿ- ಹೈಕೋರ್ಟ್

ಬಾಳು ಕೊಡುತ್ತೇನೆಂದು ಮಹಿಳೆಯನ್ನು ಕರೆದೊಯ್ದ ಅರ್ಚಕ, ಕಾಡಿನಲ್ಲಿ ಬಿಟ್ಟು ಹೋದ!

ಆಪರೇಷನ್ ಕಮಲ ಬಾಂಬ್: ಉದ್ಧವ್ ಠಾಕ್ರೆ ಸರ್ಕಾರ ಪತನಕ್ಕೆ ಡೆಡ್ ಲೈನ್

ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ತಂದೆ ತಾಯಿ!

ಇತ್ತೀಚಿನ ಸುದ್ದಿ