ಹಾಡಹಗಲೇ ಜ್ಯೋತಿಷಿಯ ಮನೆಗೆ ನುಗ್ಗಿ ಚಿನ್ನಾಭರಣ, 5 ಲಕ್ಷ ಹಣ ಕಳವು! - Mahanayaka
7:13 PM Saturday 18 - October 2025

ಹಾಡಹಗಲೇ ಜ್ಯೋತಿಷಿಯ ಮನೆಗೆ ನುಗ್ಗಿ ಚಿನ್ನಾಭರಣ, 5 ಲಕ್ಷ ಹಣ ಕಳವು!

jothishi pramod
10/07/2022

ಬೆಂಗಳೂರು: ಹಾಡಹಗಲೇ ಜ್ಯೋತಿಷಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ 5 ಲಕ್ಷ ರೂಪಾಯಿ ದೋಚಿದ ಘಟನೆ ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದಲ್ಲಿ ನಡೆದಿದೆ.


Provided by

ವರದಿಗಳ ಪ್ರಕಾರ, ಜ್ಯೋತಿಷ್ಯ ಕೇಳುವ ನೆಪದಲ್ಲಿ ಕಳ್ಳರ ತಂಡ ಬಂದಿದ್ದು,  ಬಳಿಕ ಜ್ಯೋತಿಷಿ ಪ್ರಮೋದ್ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದಾರೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಸರಳ ವಾಸ್ತು ಜ್ಯೋತಿಷಿಯ ಹತ್ಯೆ ನಡೆದಿತ್ತು. ಜ್ಯೋತಿಷ್ಯ ಹೇಳುವವರಿಗೇ ತನ್ನ ಜ್ಯೋತಿಷ್ಯ ತಿಳಿದಿಲ್ವೇ? ಎನ್ನುವ ಪ್ರಶ್ನೆಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬಂದಿದ್ದು, ಇದರ ಬೆನ್ನಲ್ಲೇ ಇದೀಗ ಮತ್ತೋರ್ವ ಜ್ಯೋತಿಷಿಯ ಮನೆಯಿಂದ ಹಾಡಹಗಲೇ ಕಳ್ಳತನವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ