ಒಂದು ಲಕ್ಷಕ್ಕೂ ಅಧಿಕ ಅನಾಥ ಶವಗಳ ಸಂಸ್ಕಾರ ಮಾಡಿದ ಮಹಾದೇವ್ ನಿಧನ
ಬೆಂಗಳೂರು: ಅನಾಥ ಶವಗಳ ಅಂತ್ಯಸಂಸ್ಕಾರ ನೆರವೇರಿಸುತ್ತಿದ್ದ ಎಂ. ಮಹದೇವ್ (59) ಅವರು ಅನಾರೋಗ್ಯದಿಂದಾಗಿ ನಿಧನರಾದರು.
ಶವಗಳನ್ನು ಆಟೊದಲ್ಲಿ ಸ್ಮಶಾನಕ್ಕೆ ಸಾಗಿಸುತ್ತಿದ್ದ ಮಹದೇವ್ ಅವರಿಗೆ ಐಎಎಸ್ ಅಧಿಕಾರಿ ಮದನ್ ಗೋಪಾಲ್, ಒಮ್ಮಿ ವಾಹನ ನೀಡಿದ್ದರು. ನಂತರ, ಅದರಲ್ಲೇ ಶವ ಸಾಗಣೆ ಮುಂದುವರಿದಿತ್ತು. 51 ವರ್ಷಗಳ ನಿರಂತರ ಕೆಲಸದಲ್ಲಿ ಮಹದೇವ ಅವರು ಒಂದು ಲಕ್ಷಕ್ಕಿಂತ ಹೆಚ್ಚು ಅನಾಥ ಶವಗಳ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಹೇಳುತ್ತಾರೆ.
ತನ್ನ 9ನೇ ವಯಸ್ಸಿನಿಂದಲೇ ಅನಾಥ ಶವಗಳ ಅಂತ್ಯ ಸಂಸ್ಕಾರ ನೆರವೇರಿಸಲಾರಂಭಿಸಿದ್ದ ಮಹದೇವ್ ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯೇ ಮನೆಯಂತಾಗಿತ್ತು. ಅಪಘಾತ, ಆತ್ಮಹತ್ಯೆ ಹೀಗೆ ಮೃತಪಡುತ್ತಿದ್ದ ಅನಾಥ ಶವಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಕೊಂಡೊಯ್ಯುತ್ತಿದ್ದ ಮಹದೇವ, ಸಂಬಂಧಿಕರ ಸ್ಥಾನದಲ್ಲಿ ನಿಂತು ಅಂತ್ಯಸಂಸ್ಕಾರ ನೆರವೇರಿಸುತ್ತಿದ್ದರು. ಪೊಲೀಸರು ಹಾಗೂ ವೈದ್ಯರು ಮಹದೇವ ಅವರನ್ನು ‘ಅನಾಥ ಶವಗಳ ತ್ರಿವಿಕ್ರಮ’ ಎಂದೇ ತಿಳಿದು ಬಂದಿದೆ.
ರಾಜರಾಜೇಶ್ವರಿನಗರದಲ್ಲಿ ನೆಲೆಸಿದ್ದ ಮಹದೇವ್ ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಹದೇವ್ ಅವರನ್ನು ಕೆಲ ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಇವರ ಈ ಮಹಾನ್ ಕೆಲಸಕ್ಕೆ ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ನಮ್ಮ ಬೆಂಗಳೂರು ಪ್ರತಿಷ್ಠಾನ ದ ಪ್ರಶಸ್ತಿಗಳು ದೊರೆತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























