ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆ! - Mahanayaka

ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆ!

deviprasada thirtha
22/07/2022


Provided by

ಬಜ್ಪೆ: ಧರ್ಮ ಚಾವಡಿಯ ಕಟ್ಟಡದಲ್ಲಿ ಸ್ವಾಮೀಜಿಯೊಬ್ಬರ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ವಾಮೀಜಿಯ ಸಾವಿನ ಬಗ್ಗೆ ಹಲವು ಅನುಮಾನಗಳು ಸೃಷ್ಟಿಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಸಮೀಪದ ತಲಕಳದ 21 ವರ್ಷ ವಯಸ್ಸಿನ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಘಟನೆ ಸಂಬಂಧ ಸ್ವಾಮೀಜಿಯ ಪೂರ್ವಾಶ್ರಮದ ಪತ್ನಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವರದಿಗಳ ಪ್ರಕಾರ,  ಸ್ವಾಮೀಜಿ ಎಕ್ಕರೆಗಟ್ಟಲೆ ಪ್ರದೇಶದಲ್ಲಿ ಧರ್ಮ ಚಾವಡಿ ಸಂಸ್ಥೆಯನ್ನು ಕಟ್ಟಿದ್ದು, ಇಲ್ಲಿಯೇ ವಾಸವಾಗಿದ್ದರು. ಪೂರ್ವಾಶ್ರಮದಲ್ಲಿ ದೇವಿಪ್ರಸಾದ್ ಶೆಟ್ಟಿ ಹೆಸರಿನಿಂದ ಗುರುತಿಸಲ್ಪಟ್ಟಿದ್ದು, ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಸಂಸಾರದಲ್ಲಿ ವಿರಸವಾಗಿ ಸನ್ಯಾಸ ಸ್ವೀಕರಿಸಿದ್ದರು ಎನ್ನಲಾಗಿದೆ.

ಪತ್ನಿಯ ದೂರಿನನ್ವಯ ಬಜ್ಪೆ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ