ಶೇಮ್ ಶೇಮ್ ಶೇಮ್!: ಬಿಜೆಪಿ ಕಾರ್ಯಕರ್ತರಿಂದ ನಾಯಕರಿಗೆ ಧಿಕ್ಕಾರ!

ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅಂತಿಮ ಯಾತ್ರೆಗೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಶಾಸಕ ಸಂಜೀವ ಮಠಂದೂರು ಹಾಗೂ ಬಿಜೆಪಿ ಮುಖಂಡರಿಗೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ ಘಟನೆ ನಡೆದಿದೆ.
ಬಿಜೆಪಿ ಮುಖಂಡರಿಗೆ ಗೋ ಬ್ಯಾಕ್ ಘೋಷಣೆ ಕೂಗಿದ ಕಾರ್ಯಕರ್ತರು ನಾಯಕರಿಗೆ ದಿಗ್ಬಂಧನ ಹಾಕಿದರಲ್ಲದೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ ನ್ಯಾಯಕ್ಕಾಗಿ ಒತ್ತಾಯಿಸಿದರು.
ನಾಯಕರನ್ನು ದಿಗ್ಬಂಧನಕ್ಕೊಳಪಡಿಸಿದ ಕಾರ್ಯಕರ್ತರು ಶೇಮ್ ಶೇಮ್ ಶೇಮ್ ಎಂದು ಘೋಷಣೆ ಕೂಗಿದರು. ಈ ವೇಳೆ ನಾಯಕರು ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka