ಸುರತ್ಕಲ್ ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ - Mahanayaka

ಸುರತ್ಕಲ್ ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

surathkal
28/07/2022


Provided by

ಸುರತ್ಕಲ್ : ಪ್ರವೀಣ್ ಹತ್ಯೆ ಮಾಸುವ ಮುನ್ನವೇ ದಕ್ಷಿಣ ಕನ್ನಡ ಜಿಲ್ಲೆ ಮತ್ತೊಂದು ಅಹಿತಕರ ಘಟನೆ ನಡೆದಿದ್ದು, ಕಾರಿನಲ್ಲಿ ಮಾರಕಾಸ್ತ್ರಗಳೊಂದಿಗೆ ಬಂದ ತಂಡವೊಂದು ಗುರುವಾರ ರಾತ್ರಿ ಯುವಕನೋರ್ವನ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.

ಮಂಗಳ ಪೇಟೆಯ ಮಹಮ್ಮದ್ ಫಾಝಿಲ್ ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿದ್ದ ವಾಝಿಯ ಮೇಲೆ ಅಂಗಡಿಯ ಎದುರಿನ ಜಗಲಿಯಲ್ಲೇ ತಲವಾರಿನಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಹಲ್ಲೆಯ ಪರಿಣಾಮ ಯುವಕನಿಗೆ ಸಾಕಷ್ಟು ರಕ್ತ ಹೋಗಿದ್ದು, ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯುವಕನ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ