ಸಿದ್ದರಾಮೋತ್ಸವಕ್ಕೆ  ಆಗಮಿಸುತ್ತಿದ್ದ ಕ್ರೂಸರ್ ಪಲ್ಟಿ: ಓರ್ವ ಸಾವು - Mahanayaka
5:35 PM Thursday 16 - October 2025

ಸಿದ್ದರಾಮೋತ್ಸವಕ್ಕೆ  ಆಗಮಿಸುತ್ತಿದ್ದ ಕ್ರೂಸರ್ ಪಲ್ಟಿ: ಓರ್ವ ಸಾವು

bagalkot
02/08/2022

ಬಾಗಲಕೋಟೆ:  ಆಗಸ್ಟ್ 3ರಂದು ನಡೆಯಲಿರುವ ಸಿದ್ದರಾಮೋತ್ಸವಕ್ಕೆ  ಆಗಮಿಸುತ್ತಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ  ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ನಡೆದಿದೆ.


Provided by

ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಮೃತ ವ್ಯಕ್ತಿ ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದವ ಎಂದು ತಿಳಿದು ಬಂದಿದೆ.

ದುರ್ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೆರೂರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ದಾವಣಗೆರೆಯಲ್ಲಿ ಆಗಸ್ಟ್ 3ರಂದು  ಸಿದ್ದಾರಾಮೋತ್ಸವ ನಡೆಯಲಿದ್ದು, ಭರ್ಜರಿ ಸಿದ್ಧತೆ ನಡೆಯುತ್ತಿದೆ. ಸಿದ್ದು ಅಮೃತ ಮಹೋತ್ಸವಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಭೇಟಿ ನೀಡುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ