ಏಕಾಂಗಿಯಾಗಿ 22,000 ಕಿ.ಮೀ. ಯಾತ್ರೆ ಮುಗಿಸಿದ ಯುವತಿ..! - Mahanayaka
11:09 AM Friday 14 - November 2025

ಏಕಾಂಗಿಯಾಗಿ 22,000 ಕಿ.ಮೀ. ಯಾತ್ರೆ ಮುಗಿಸಿದ ಯುವತಿ..!

amrutha joshi
10/08/2022

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸವಿನೆನಪಿನಲ್ಲಿ ಕಾಸರಗೋಡು ಮೂಲದ ಮಂಗಳೂರಿನ ಕೆನರಾ  ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಇದೇ ಆಗಸ್ಟ್ 10 ರಂದು ಬೆಳಿಗ್ಗೆ 10:30 ಗಂಟೆಗೆ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಲಿದ್ದಾರೆ.

ಇವ್ರನ್ನು ಕೆನರಾ ಅಸೋಸಿಯೇಶನ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಗುತ್ತದೆ. ಅಮೃತಾ ಜೋಷಿಯವರು ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ ದೇಶವ್ಯಾಪಿ 22,000 ಕಿ.ಮೀ, ಸಂಚರಿಸಿದ್ದಾರೆ.

ಬರ್ಮಾ, ಬಾಂಗ್ಲಾ, ನೇಪಾಳದ ಗಡಿಯಲ್ಲಿಯೂ ಸಂಚರಿಸಿ ಅಲ್ಲಿ ನಮ್ಮ ಭಾರತೀಯ ಸೈನಿಕರ ಸವಾಲಿನ ಪರಿಸ್ಥಿತಿಯನ್ನು ಕೂಡ ಕಣ್ಣಾರೆ ಕಂಡು ಬಂದಿದ್ದಾರೆ.

ರಾಜ್ಯದ ಸಾಂಸ್ಕೃತಿಕ ರಾಯಭಾರಿ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿರುವ ಅಮೃತಾ ಜೋಷಿಯವರನ್ನು ಸ್ವಾಗತಿಸಿ, ಅಭಿನಂದಿಸುವ ಕಾರ್ಯಕ್ರಮ ನಡೆಯಲಿದೆ.

bumla

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ