ನಗರದಲ್ಲಿ ಗಾಂಜಾ ಮಾರಾಟ ಪ್ರಕರಣ: ಆರೋಪಿಗೆ ಕಠಿಣ ಜೈಲು ಶಿಕ್ಷೆ - Mahanayaka
1:38 AM Friday 12 - September 2025

ನಗರದಲ್ಲಿ ಗಾಂಜಾ ಮಾರಾಟ ಪ್ರಕರಣ: ಆರೋಪಿಗೆ ಕಠಿಣ ಜೈಲು ಶಿಕ್ಷೆ

arfan
05/09/2022

ಗಾಂಜಾ ಮಾರಾಟ ಪ್ರಕರಣದ ಆರೋಪಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿಯ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಲಯ ಶನಿವಾರ ಆದೇಶ ನೀಡಿದೆ.


Provided by

ಉಡುಪಿ ತಾಲೂಕಿನ ಹೂಡೆಯ 27ವರ್ಷದ ಅರ್ಫನ್  ಶಿಕ್ಷೆಗೆ ಗುರಿಯಾಗಿರುವ ಆರೋಪಿ. ಈತನನ್ನು ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಸೆನ್ ಅಪರಾಧ ಪೊಲೀಸರು 2020ರ ಸೆ.5ರಂದು ಬಂಧಿಸಿ, ಒಂದು ಕೆ.ಜಿ, 48 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದರು.

ಅಂದಿನ ಸೆನ್ ಅಪರಾಧ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮ ಚಂದ್ರ ನಾಯಕ್ ಈ ಪ್ರಕರಣದ ದೂರುದಾರರಾಗಿದ್ದು, ಎಸ್ಸೈ ಲಕ್ಷ್ಮಣ  ಪ್ರಕರಣದಲ್ಲಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ವಿಶೇಷ ನ್ಯಾಯಾಧೀಶ ಶಾಂತವೀರ ಶಿವಪ್ಪ, ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟು, ಅರ್ಫನ್‌ ಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ಮತ್ತು ದಂಡ ಪಾವತಿಸಲು ತಪ್ಪಿದಲ್ಲಿ 6 ತಿಂಗಳ ಸರಳ ಕಾರಾಗೃಹ ವಾಸ ವಿಧಿಸಿ ಆದೇಶ ನೀಡಿದರು. ಪ್ರಾಸಿಕ್ಯೂಶನ್ ಪರವಾಗಿ ಹಿರಿಯ ಪಬ್ಲಿಕ್ ಪ್ರಾಸಿಕ್ಯೂಶನ್ ಶಾಂತಿಬಾಯಿ ವಾದ ಮಂಡನೆ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ