ಚಿರತೆ ದಾಳಿಯಿಂದ ವೃದ್ಧನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು - Mahanayaka

ಚಿರತೆ ದಾಳಿಯಿಂದ ವೃದ್ಧನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

krishna shetty
09/09/2022

ಕಾರ್ಕಳ: ತಾಲೂಕಿನ ಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚಿರತೆಯೊಂದು ದಾಳಿ ನಡೆಸಿ ಪರಿಣಾಮ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮುಲ್ಲಡ್ಕದ ರಾಜಶ್ರೀ ರೈಸ್ ಮಿಲ್ ಬಳಿಯ ಕೃಷ್ಣ ಶೆಟ್ಟಿ ಎಂಬವರ ಮೇಲೆ ಚಿರತೆ ದಾಳಿ ನಡೆಸಿದೆ ಎನ್ನಲಾಗಿದೆ. ಚಿರತೆ ದಾಳಿಯಿಂದ ಕೃಷ್ಣ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅರಣ್ಯ ಇಲಾಖೆಯವರು, ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಚಿರತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ