ಕೆರೆಯ ಮಧ್ಯೆ ಇರುವ ವಿದ್ಯುತ್ ಕಂಬ ಏರಿ ದುರಸ್ತಿ ಮಾಡಿದ ಬೆಸ್ಕಾಂ ಸಿಬ್ಬಂದಿ - Mahanayaka
11:30 AM Tuesday 4 - November 2025

ಕೆರೆಯ ಮಧ್ಯೆ ಇರುವ ವಿದ್ಯುತ್ ಕಂಬ ಏರಿ ದುರಸ್ತಿ ಮಾಡಿದ ಬೆಸ್ಕಾಂ ಸಿಬ್ಬಂದಿ

bescom
12/09/2022

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಲಕ್ಕೂರು ಕೆರೆಯಲ್ಲಿ ಬೆಸ್ಕಾಂ ಸಿಬ್ಬಂದಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಕೆರೆಯ ಮಧ್ಯೆ ಇರುವ ವಿದ್ಯುತ್ ಕಂಬ ಏರಿ ವಿದ್ಯುತ್ ದುರಸ್ತಿ ಮಾಡಿದ್ದು, ಇದೀಗ ಬೆಸ್ಕಾಂ ಸಿಬ್ಬಂದಿಯ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೆರೆಯ ಮಧ್ಯೆ ಇರುವ ವಿದ್ಯುತ್ ಕಂಬದ ಬಳಿಗೆ ತೆಪ್ಪದ ಸಹಾಯದೊಂದಿಗೆ ತೆರಳಿದ ಬೆಸ್ಕಾಂ ಸಿಬ್ಬಂದಿ ಕಂಬ ಏರಿ ದುರಸ್ತಿ ಮಾಡಿದ್ದಾರೆ. ಇಬ್ಬರು ತೆಪ್ಪದಲ್ಲಿದ್ದರೆ ಇನ್ನಿಬ್ಬರು ಸಿಬ್ಬಂದಿ ಕಂಬ ಏರಿ ಕೆಲಸ ನಿರ್ವಹಿಸುತ್ತಿರುವ ದೃಶ್ಯ ಕಂಡು ಬಂತು.

ಬೆಸ್ಕಾಂ ಸಿಬ್ಬಂದಿಯ ಸಾಹಸ ಹಾಗೂ ಕರ್ತವ್ಯ ನಿಷ್ಠೆಗೆ ವಿದ್ಯುತ್ ನಿಗಮದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಬೆಸ್ಕಾಂ ಸಿಬ್ಬಂದಿ ತೋರುತ್ತಿರುವ ಬದ್ಧತೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ