ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ | ಸಚಿವ ಲಕ್ಷ್ಮಣ ಸವದಿ - Mahanayaka

ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ | ಸಚಿವ ಲಕ್ಷ್ಮಣ ಸವದಿ

13/12/2020


Provided by

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಇದೇ ಸಂದರ್ಭದಲ್ಲಿ,   ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಒಂದು ನಿಗಮದ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಿದರೆ, ಇತರ ನಿಗಮಗಳೂ ಇದೇ ಬೇಡಿಯನ್ನಿಡುತ್ತವೆ ಎಂದು ಕಾರಣ ಹೇಳಿದರು.

ಸರ್ಕಾರಿ ನೌಕರರನ್ನಾಗಿ ಮಾಡಬೇಕೆನ್ನುವ ಬೇಡಿಕೆಯನ್ನು ಈಡೇರಿಸಲು ಸಾಧ್ಯವೇ ಇಲ್ಲ. ಉಳಿದೆಲ್ಲ ಬೇಡಿಕೆಗಳನ್ನು ಆರ್ಥಿಕ ಇತಿಮಿತಿಗಳಲ್ಲಿ ಈಡೇರಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಸಾರಿಗೆ ನೌಕರರ  ಮುಷ್ಕರ ಇಂದಿಗೆ ನಾಲ್ಕು ದಿನಕ್ಕೆ ತಲುಪಿದ್ದು,  ಸರ್ಕಾರ ಹಾಗೂ ಸಾರಿಗೆ ಸಂಸ್ಥೆ ನೌಕರರು ತಮ್ಮ ಪಟ್ಟು ಸಡಿಲಿಸಿಲ್ಲ.

ಇತ್ತೀಚಿನ ಸುದ್ದಿ