ಮಂಗಳೂರು ದಸರ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಏನಿದೆ ವಿಶೇಷ? - Mahanayaka
7:58 AM Wednesday 17 - September 2025

ಮಂಗಳೂರು ದಸರ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಏನಿದೆ ವಿಶೇಷ?

mangalore dasara
26/09/2022

ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ಸೋಮವಾರದಿಂದ ಆರಂಭಗೊಂಡು ಅಕ್ಟೋಬರ್ 6ರವರೆಗೆ ನಡೆಯಲಿದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿದೆ ಎಂದು  ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ತಿಳಿಸಿದ್ದಾರೆ.


Provided by

ಕುದ್ರೋಳಿಯಲ್ಲಿ ನಡೆದ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಮಹೋತ್ಸವದ ಅಂಗವಾಗಿ ಪ್ರತಿದಿನ ಮಧ್ಯಾಹ್ನ 12:30ಕ್ಕೆ ಪುಷ್ಪಾಲಂಕಾರ ಮಹಾಪೂಜೆ, 7.00ರಿಂದ 8:30ರವರೆಗೆ ಭಜನಾ ಕಾರ್ಯಕ್ರಮ, 8:30ರಿಂದ ಶ್ರೀ ದೇವಿ ಪುಷ್ಪಾಲಂಕಾರ ಪೂಜೆ, ಅನ್ನದಾನ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇವರ ಬಲಿ ಉತ್ಸವಗಳು ನಡೆಯಲಿದೆ ಎಂದರು.

ಇದೇ ವೇಳೆ ಕ್ಷೇತ್ರದ ಕಾರ್ಯದರ್ಶಿ ಮಾಧವ ಸುವರ್ಣ ಮಾತನಾಡಿ, ಸೋಮವಾರ ಬೆಳಗ್ಗೆ 9.30ಕ್ಕೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ನವಕಲಶಾಭಿಷೇಕ ಧರ್ನುಲಗ್ನ, ಕಲಶ ಪತ್ರಿಷ್ಠೆಘಿ, ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ ನಡೆಯಲಿದೆ. ಈ ಸಂದರ್ಭ ದೀಪ ಬೆಳಗುವ ಮೂಲಕ ದಸರಾ ಕಾರ್ಯಕ್ರಮಕ್ಕೆ ಕೇಂದ್ರದ ವಿತ್ತ ಸಚಿವ, ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಚಾಲನೆ ನೀಡಲಿದ್ದಾರೆ. ಶಾಸಕರುಗಳು, ಗಣ್ಯರು ಈ ಸಂದರ್ಭ ಉಪಸ್ಥಿತರಿರುವರು ಎಂದರು.

ಸೆ. 27ರಂದು ಬೆಳಗ್ಗೆ ಗಂಟೆ 10.00ಕ್ಕೆ ದುರ್ಗಾಹೋಮ, ಸೆ. 28ರಂದು ಬೆಳಗ್ಗೆ  ಗಂಟೆ 10.00ಕ್ಕೆ ಆರ್ಯ ದುರ್ಗಾಹೋಮ, ಸೆ. 29ರಂದು ಬೆಳಗ್ಗೆ  ಗಂಟೆ 10.00ಕ್ಕೆ ಅಂಬಿಕಾ ದುರ್ಗಾ ಹೋಮ, ಸೆ.30ರಂದು ಬೆಳಗ್ಗೆ  ಗಂಟೆ 10.00ಕ್ಕೆ ಭಗವತೀ ದುರ್ಗಾ ಹೋಮ (ಲಲಿತಾ ಪಂಚಮಿ), ಸಾಮೂಹಿಕ ಚಂಡಿಕಾ ಹೋಮ, ಅ. 1ರಂದು ಬೆಳಗ್ಗೆ  ಗಂಟೆ 10.00ಕ್ಕೆ ಕುಮಾರಿ ದುರ್ಗಾ ಹೋಮ, ಅ. 2ರಂದು ಬೆಳಗ್ಗೆ 10.00ಕ್ಕೆ ಮಹಿಷಮರ್ದಿನಿ ದುರ್ಗಾ ಹೋಮ, ಅ.3ರಂದು ಬೆಳಗ್ಗೆ  ಗಂಟೆ 10.00ಕ್ಕೆ ಚಂಡಿಕಾಹೋಮ, ಹಗಲೋತ್ಸವ, ದುರ್ಗಾಷ್ಟಮಿ, ಅ.4ರಂದು ಬೆಳಗ್ಗೆ  ಗಂಟೆ 10.00ರಿಂದ ಸರಸ್ವತಿ ದುರ್ಗಾಹೋಮ, 11.30ಕ್ಕೆ ಶತಸೀಯಾಳಾಭಿಷೇಕ, ಶಿವಪೂಜೆ (ಮಹಾನವಮಿ), ಮಹಾ ಅನ್ನಸಂತರ್ಪಣೆ ನಡೆಯಲಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ