ಖಾಸಗಿ ಆಸ್ಪತ್ರೆಯ ಡೀನ್ ನಾಪತ್ತೆ - Mahanayaka

ಖಾಸಗಿ ಆಸ್ಪತ್ರೆಯ ಡೀನ್ ನಾಪತ್ತೆ

manglore
27/09/2022

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರ ಡೀನ್ ಆಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯೋರ್ವರು ಸೆಪ್ಟೆಂಬರ್ 25ರಿಂದ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೊರಗೆ ಹೋಗಿ ಬರುತ್ತೇನೆಂದು ಪತ್ನಿಯ ಬಳಿ ಹೇಳಿ ತನ್ನ ದ್ವಿಚಕ್ರ ವಾಹನದಲ್ಲಿ ತೆರಳಿರುವ ಅವರು ರಾತ್ರಿಯಾದರೂ ಮನೆಗೆ ಬರಲಿಲ್ಲ.

ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್ಡ್ ಆಫ್ ಆಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

ಇತ್ತೀಚಿನ ಸುದ್ದಿ