ಧರ್ಮಸ್ಥಳದ ಕಾಡಿಗೆ ಬಂದು ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿದ ಯುವಕ! - Mahanayaka
6:22 PM Saturday 13 - September 2025

ಧರ್ಮಸ್ಥಳದ ಕಾಡಿಗೆ ಬಂದು ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿದ ಯುವಕ!

sunil
28/09/2022

ಬೆಳ್ತಂಗಡಿ: ಯುವಕನೊಬ್ಬ ಧರ್ಮಸ್ಥಳದ ಕಾಡಿಗೆ ಬಂದು ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಅದನ್ನು ಕುಟುಂಬದವರಿಗೆ ಕಳುಹಿಸಿದ್ದಾನೆ, ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರ ಸಮಯ ಪ್ರಜ್ಞೆಯಿಂದ ಆಸ್ಪತ್ರೆಗೆ ದಾಖಲಿಸಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.


Provided by

ಧರ್ಮಸ್ಥಳ ಗ್ರಾಮದ ಮಹಾತ್ಮಾ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥ್ ಪುರದ ನಿವಾಸಿ ಸುನಿಲ್(28) ಎಂಬಾತ ತನ್ನ ಹೀರೋ ಹೊಂಡಾ ಬೈಕ್ ನಲ್ಲಿ ಬುಧವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದಾನೆ ದೇವರ ದರ್ಶನ ಮುಗಿಸಿ ಮಧ್ಯಾಹ್ನದ ನಂತರ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹೋಗಿ ಕುಳಿತು ತನ್ನ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಕೃಷಿ ಜಾಮೀನಿಗೆ ಉಪಯೋಗಿಸುವ  ವಿಷ ಪದಾರ್ಥವನ್ನು ಕುಡಿದಿದ್ದಾನೆ.

ನಂತರ ಅದರ ವಿಡಿಯೋ ಸಮೇತ ಧರ್ಮಸ್ಥಳ ದೇವರ ದರ್ಶನ ಪಡೆದ ಫೋಟೋ , ಮಹಾತ್ಮ ಗಾಂಧಿ ವೃತ್ತದ ಪೋಟೋಗಳನ್ನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ್ದಾನೆ ಇದನ್ನು ನೋಡಿದ ಕುಟುಂಬದವರು ಮತ್ತು ಸ್ನೇಹಿತರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ತಕ್ಷಣ ಎಚ್ಚೆತ್ತ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಮತ್ತು ಸಿಬ್ಬಂದಿಗಳು ಕಾಡಿನ ಸುತ್ತಮುತ್ತ ಹುಡುಕಾಟ ನಡೆಸಿದಾಗ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದಾಗ ಪೊಲೀಸರು ವಾಹನದಲ್ಲಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.

ಸುನಿಲ್  ಚಪ್ಪಲ್ ಶಾಪ್ ಹೊಂದಿದ್ದು ಮದುವೆಯಾಗಿ ಮೂರು ತಿಂಗಳ ಮಗು ಕೂಡ ಇದ್ದು, ಗಂಡ ಹೆಂಡತಿ ನಡುವೆ ನಡೆದ ಜಗಳದಿಂದ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದಾನೆ ಎನ್ನಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ